ಉಜಿರೆ: ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳಸೂತ್ರ ಹಾಗೂ ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು ಹದಿಮೂರು ಸಾವಿರ ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು 2026ರ ಏಪ್ರಿಲ್ 25 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644,
ವಾಟ್ಸಪ್ ನಂ. 9663464648, 8147263422
