ಎಪ್ರಿಲ್ 4: ‘ಮಹಾಪರ್ವ’ ಬಿಡುಗಡೆ

0
113

ಮಂಗಳೂರು: ವೃತ್ತಿಯಲ್ಲಿ ನ್ಯಾಯವಾದಿಯಾಗಿ ‘ದೇವಕಿತನಯ’ ಎಂಬ ಹೆಸರಿನಿಂದ ಹರಿದಾಸರಾಗಿ ಖ್ಯಾತರಾದ ಮಹಾಬಲ ಶೆಟ್ಟಿ ಕೂಡ್ಲು ಅವರಿಗೆ 80 ವರ್ಷ ತುಂಬಿದ ಸಂದರ್ಭದಲ್ಲಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರ ಸಂಪಾದಕತ್ವದಲ್ಲಿ ‘ಮಹಾಪರ್ವ’ ಎಂಬ ಅಭಿನಂದನಾ ಸಂಪುಟ ಪ್ರಕಟವಾಗಿದೆ. ವಿಕಾಸ್ ಎಜುಕೇಶನ್ ಟ್ರಸ್ಟ್ ಇದರ ವತಿಯಿಂದ ಕಲ್ಲೂರು ನಾಗೇಶ್ ಅವರ ಆಕೃತಿ ಪಿಂಟ್ಸ್ ಮುದ್ರಿಸಿರುವ ಗ್ರಂಥದ ಬಿಡುಗಡೆ ಸಮಾರಂಭ ಇದೇ 2025 ಎಪ್ರಿಲ್ 4ರಂದು ಶುಕ್ರವಾರ ಪೂರ್ವಾಹ್ನ ಗಂ.11:30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಹರಿಕಥಾ ಪರಿಷತ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಂಟಿಯಾಗಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಖ್ಯಾತ ಉದ್ಯಮಿ, ಮಾಜಿ ಸಚಿವ ಜೆ.ಕೃಷ್ಣ ಪಾಲೆಮಾರ್ ಕೃತಿ ಬಿಡುಗಡೆ ಮಾಡುವರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸುವರು. ಯಕ್ಷಗಾನ ವಿದ್ವಾಂಸ ಡಾ. ಎಂ ಪ್ರಭಾಕರ ಜೋಶಿ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರಣಿಕ್ ಮುಖ್ಯ ಅತಿಥಿಗಳಾಗಿರುವ. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಹರಿಕಥಾ ಪರಿಷತ್ ಅಧ್ಯಕ್ಷ ಮಹಾಬಲ ಶೆಟ್ಟಿ ಕೂಡ್ಲು ಮತ್ತು ಕೃತಿಯ ಸಂಪಾದಕ ಭಾಸ್ಕರ ರೈ ಕುಕ್ಕುವಳ್ಳಿ ಉಪಸ್ಥಿತರಿವರು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here