ಸಂಘಟನೆಯ ಮೂಲಕ ವ್ಯಕ್ತಿ ನಿರ್ಮಾಣ, ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷ ಭಾರತೀಯ ಜನತಾ ಪಾರ್ಟಿಯ ‘ಸ್ಥಾಪನಾ ದಿನಾಚರಣೆ’ಯು ಏಪ್ರಿಲ್ 6, ಸೋಮವಾರ ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರಿಗೆ ಗೌರವಾರ್ಪಣೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ತಿಳಿಸಿದ್ದಾರೆ.
ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಪಕ್ಷದ ಕಾರ್ಯಕರ್ತರು ತಮ್ಮ ಮನೆಯ ಮೇಲೆ ಪಕ್ಷದ ಧ್ವಜವನ್ನು ಹಾರಿಸಲಿದ್ದಾರೆ. ಜಿಲ್ಲೆಯ ಎಲ್ಲಾ 1,112 ಬೂತ್ ಗಳ ಅಧ್ಯಕ್ಷರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ಹಾಗೂ ಬೂತ್ ಸಮಿತಿ ಸಭೆ ನಡೆಯಲಿದೆ ಎಂದು ದಿನಕರ ಶೆಟ್ಟಿ ಹೆರ್ಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

