ಮೂಡುಬಿದಿರೆಯ ಬನ್ನಡ್ಕದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಆ.29-31ರವರೆಗೆ ಆರಾಧನಾ ಮಹೋತ್ಸವ

0
12

ಮೂಡುಬಿದಿರೆ : ಬನ್ನಡ್ಕ ದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವು ಆಗಸ್ಟ್ 29ರಿಂದ 31ರವರೆಗೆ ಧಾರ್ಮಿಕ ನಡೆಯಲಿದೆ.

ಆರಾಧನಾ ಮಹೋತ್ಸವದ ಅಂಗವಾಗಿ ಆಗಸ್ಟ್ 28ರಂದು ಶುಕ್ರವಾರ ಸಂಜೆ 6 ಗಂಟೆಯಿಂದ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ, ಭಜನೆ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಸಂಜೆ 6.30ರಿಂದ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ, ಬನ್ನಡ ಇವರಿಂದ ಕುಣಿತ ಭಜನೆ, ಸಂಜೆ 7.30ರಿಂದ ರಂಗಪೂಜೆ ಹಾಗೂ ಮಹಾಪೂಜೆ ನಡೆಯಲಿದೆ.

ಆಗಸ್ಟ್ 29ರಂದು ಶನಿವಾರ ಪೂರ್ವಾರಾಧನೆ ನಡೆಯಲಿದ್ದು, ಬೆಳಗ್ಗೆ 5.30ರಿಂದ ನಿರ್ಮಾಲ್ಯ ವಿಸರ್ಜನಾ ಪೂಜೆ, ಪಂಚಾಮೃತ ಅಭಿಷೇಕ ಹಾಗೂ ಅಲಂಕಾರ ಸೇವೆ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಕಟೀಲಿನ ಸುಧಾ ಮತ್ತು ತಂಡದವರಿಂದ ಭಜನಾಮೃತ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಹಾಗೂ 1 ಗಂಟೆಗೆ ಅನ್ನಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6ರಿಂದ ರಾತ್ರಿ 9ರವರೆಗೆ ಬನ್ನಡದ ಯಕ್ಷಸಿರಿ ಕಲಾ ವೇದಿಕೆ ವತಿಯಿಂದ ‘ಶ್ರೀ ಸುದರ್ಶನೋಪಾಖ್ಯಾನ’ ಯಕ್ಷಗಾನ ಬಯಲಾಟ ನಡೆಯಲಿದೆ. ಸಂಜೆ 7.30ರಿಂದ ರಂಗಪೂಜೆ, ಮಹಾಪೂಜೆ, ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ಉಯ್ಯಾಲೆ ಸೇವೆ ಹಾಗೂ ಸರ್ವಸೇವೆಗಳು ನೆರವೇರಲಿವೆ.

ಆಗಸ್ಟ್ 30ರಂದು ಭಾನುವಾರ ಮಧ್ಯಾರಾಧನೆ ಅಂಗವಾಗಿ ಬೆಳಗ್ಗೆ 5.30ರಿಂದ ನಿರ್ಮಾಲ್ಯ ವಿಸರ್ಜನಾ ಪೂಜೆ, ಮನ್ಯುಸೂಕ್ತ, ವಾಯುಸ್ತುತಿ, ಅಷ್ಟೋತ್ತರ ಸಹಿತ ಪಂಚಾಮೃತ ಅಭಿಷೇಕ ಹಾಗೂ ಅಲಂಕಾರ ಸೇವೆ ನಡೆಯಲಿದೆ.

ಬೆಳಗ್ಗೆ 10.30ರಿಂದ ಪುತ್ತಿಗೆ, ಮೂಡುಬಿದಿರೆಯ ಶಿವಳ್ಳಿ ಮಹಿಳಾ ವೇದಿಕೆಯಿಂದ ದಾಸರ ಪದಗಳ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 11.30ರಿಂದ ಬ್ರಾಹ್ಮಣ ಅಲಂಕಾರ ಪೂಜೆ ಹಾಗೂ ಮಹಾಪೂಜೆ ನೆರವೇರಲಿದೆ. ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಮಹಾಅನ್ನಸಂತರ್ಪಣೆ ಆಯೋಜಿಸಲಾಗಿದೆ.

ಸಂಜೆ 5 ಗಂಟೆಯಿಂದ ಮಿತ್ತಬೈಲು, ಮೂಡುಬಿದಿರೆಯ ಶ್ರೀ ರಾಮ ಭಜನಾ ಮಂಡಳಿಯಿಂದ ಭಕ್ತಿ ಭಜನೆ ನಡೆಯಲಿದ್ದು, ಸಂಜೆ 6.30ರಿಂದ ರಂಗಪೂಜೆ, ಮಹಾಪೂಜೆ, ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ಉಯ್ಯಾಲೆ ಸೇವೆ ಹಾಗೂ ಸರ್ವಸೇವೆಗಳು ನಡೆಯಲಿವೆ.

ಆಗಸ್ಟ್ 31ರಂದು ಸೋಮವಾರ ಉತ್ತರಾರಾಧನೆ ನಡೆಯಲಿದ್ದು, ಬೆಳಗ್ಗೆ 5.30ರಿಂದ ನಿರ್ಮಾಲ್ಯ ವಿಸರ್ಜನಾ ಪೂಜೆ, ಪಂಚಾಮೃತ ಅಭಿಷೇಕ ಹಾಗೂ ಅಲಂಕಾರ ಸೇವೆ ನಡೆಯಲಿದೆ.

ಬೆಳಗ್ಗೆ 11 ಗಂಟೆಗೆ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ, ಬನ್ನಡ್ಕ ಇವರಿಂದ ಭಕ್ತಿ ಭಜನೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಹಾಗೂ 1 ಗಂಟೆಗೆ ಅನ್ನಪ್ರಸಾದ ವಿತರಣೆ ನಡೆಯಲಿದೆ.

ಸಂಜೆ 4 ಗಂಟೆಗೆ ನಂದಳಿಕೆಯ ವಿಶಾಲ ಯಕ್ಷಕಲಾ ಬಳಗದಿಂದ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ಮೂಡುಬಿದಿರೆಯ ಶ್ರೀ ವೆಂಕಟರಮಣ ಭಜನಾ ಮಂಡಳಿಯಿಂದ ಭಕ್ತಿ ಭಜನೆ ನಡೆಯಲಿದ್ದು, ಸಂಜೆ 7.30ರಿಂದ ರಂಗಪೂಜೆ, ಮಹಾಪೂಜೆ, ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ಉಯ್ಯಾಲೆ ಸೇವೆ ಹಾಗೂ ಸರ್ವಸೇವೆಗಳು ನೆರವೇರಲಿವೆ.

ಮೂರು ದಿನಗಳ ಕಾಲ ನಡೆಯಲಿರುವ ಆರಾಧನಾ ಮಹೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಗುರುಸಾರ್ವಭೌಮರ ಅನುಗ್ರಹಕ್ಕೆ ಪಾತ್ರರಾಗುವಂತೆ ಶ್ರೀ ಗುರು ರಾಘವೇಂದ್ರ ಮಠ, ಬನ್ನಡ್ಕ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.