ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಅರ್ಚನಾ ಆಯ್ಕೆ

0
15

ಮೂಡುಬಿದಿರೆ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಅರ್ಚನಾ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕಿನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅರ್ಚನಾ ಜೈನ್ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಕಳೆದ 20 ವರ್ಷಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಕರ್ನಾಟಕ ರಾಜ್ಯ ಎನ್. ಪಿ. ಎಸ್. ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಪದಾಧಿಕಾರಿಯಾಗಿದ್ದು, ಕಳೆದ ಸಾನಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಲ್ಲಿ ತಾಲೂಕು ಕೋಶಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.

ಪ್ರಸ್ತುತ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಾಂಟ್ರಾಡಿ ಇಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಚುನಾವಣಾ ಅಧಿಕಾರಿಯದ ಪ್ರಪುಲ್ಲ ಶೆಟ್ಟಿ ಅವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here