ವಿದ್ಯಾರ್ಥಿವೇತನ , ಸನ್ಮಾನ ಹಾಗೂ ‘ಯುವಸಿರಿ’ ಪುರಸ್ಕಾರ
ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಶ್ರೀ ನಾರಾಯಣ ಗುರುಗಳ ಜೀವನ–ಸಂದೇಶ ಗೋಷ್ಠಿ’ ಅರಿವು–2026′ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿವೇತನ , ಸನ್ಮಾನ ಹಾಗೂ ‘ಯುವಸಿರಿ’ ಪುರಸ್ಕಾರ ಪ್ರದಾನ ಸಮಾರಂಭವು ಆಗಸ್ಟ್ 2ರಂದು (ಭಾನುವಾರ) ಮೂಡುಬಿದಿರೆಯ ಅಮೃತ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9.30 ಗಂಟೆಗೆ ಆರಂಭವಾಗಲಿರುವ ಕಾರ್ಯಕ್ರಮವನ್ನು ಮೂಲ್ಕಿ–ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಲಿದ್ದಾರೆ. ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು, ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್, ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷ ನವೀನ್ ಚಂದ್ರ ಕರ್ಕೇರ, ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ್ ಸಾಧು ಸನಿಲ್, ಉದ್ಯಮಿ ಸುಗಂಧಿ ಹರೀಶ್ ಅಮೀನ್ ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಾರಾಯಣಗುರು ವಸತಿ ಶಾಲೆ, ಪೂಂಜಾಲಕಟ್ಟೆಯ ಪ್ರಾಂಶುಪಾಲ ಸಂತೋಷ್ ಎಸ್. ಸನಿಲ್ ಅವರು “ಶ್ರೀ ನಾರಾಯಣ ಗುರುಗಳ ಜೀವನ ಮತ್ತು ಸಂದೇಶ” ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಸಂಘಟನಾ ಕಾರ್ಯದರ್ಶಿ ಶುಭಕರ ಪೂಜಾರಿ ಸಾವ್ಯ, ಯುವಸ್ಪಂದನ ಸೇವಾ ಯೋಜನೆಯ ಅಧ್ಯಕ್ಷ ನವಾನಂದ, ಶ್ರೀ ನಾರಾಯಣಗುರು ತತ್ವಪ್ರಚಾರ ನಿರ್ದೇಶಕಿ ಯೋಗಿತಾ ನವಾನಂದ ಹಾಗೂ ವಿದ್ಯಾನಿಧಿ ನಿರ್ದೇಶಕ ದಯಾನಂದ ಮಾಸ್ತಿಕಟ್ಟೆ ಅವರು ಗೌರವ ಉಪಸ್ಥಿತರಾಗಿ ಕಾರ್ಯಕ್ರಮದ ಮೆರುಗು ಹೆಚ್ಚಿಸಲಿದ್ದಾರೆ.
ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು, ಕಾರ್ಯದರ್ಶಿ ಮೇಘನಾ, ಜಯಶೀಲಾ ಎಸ್. ಪೂಜಾರಿ ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

