Monday, January 13, 2025
Homeಕುಂದಾಪುರಸೇನಾ ವಾಹನ ಅಪಘಾತ: ಕುಂದಾಪುರದ ಯೋಧ ಅನೂಪ್ ಹುತಾತ್ಮ

ಸೇನಾ ವಾಹನ ಅಪಘಾತ: ಕುಂದಾಪುರದ ಯೋಧ ಅನೂಪ್ ಹುತಾತ್ಮ

ಕುಂದಾಪುರ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಹುತಾತ್ಮರಾದವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ.

ಅಪಘಾತದಲ್ಲಿ ಒಟ್ಟು ಐವರು ಹುತಾತ್ಮರಾಗಿದ್ದು, ಅವರಲ್ಲಿ ಅನೂಪ್ ಪೂಜಾರಿ ಸೇರಿದಂತೆ ಮೂವರು ಯೋಧರು ಕರ್ನಾಟಕದವರು ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವು ಆಳವಾದ ಕಂದಕಕ್ಕೆ ಉರುಳಿದ್ದು , ಘಟನೆಯಲ್ಲಿ ಐವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 5 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ 18 ಯೋಧರು ವಾಹನದಲ್ಲಿದ್ದರು ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಘರೋವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.
ನಿಲಂ ಪ್ರಧಾನ ಕಛೇರಿಯಿಂದ ಎಲ್‌ಒಸಿ ಮೂಲಕ ಬನೋಯ್ ಘರೋವಾ ಪೋಸ್ಟ್‌ಗೆ ತೆರಳುತ್ತಿದ್ದ 11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು ಅಪಘಾತಕ್ಕೀಡಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆ ವಾಹನವು ಸುಮಾರು 150 ಅಡಿ ಆಳದ ಕಮರಿಗೆ ಬಿದ್ದಿದ್ದು, ಚಾಲಕ ಸೇರಿದಂತೆ 5 ಸೈನಿಕರಿಗೆ ಗಂಭೀರ ಗಾಯಗಳಾಗಿವೆ.
ಈ ಘಟನೆಯಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು. ಸುದ್ದಿ ತಿಳಿದು ಮೃತ ಯೋಧರ ಸಂಬಂಧಿಕರ, ಮಿತ್ರರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಅನೂಪ್ ಕುಟುಂಬಕ್ಕೆ ಸೇನಾಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಕಳೆದ 13 ವರ್ಷಗಳಿಂದ ಅನೂಪ್ ಸೇನೆಯಲ್ಲಿದ್ದು 2 ವರ್ಷದ ಹಿಂದೆ ವಿವಾಹವಾಗಿತ್ತು. ದಂಪತಿಗೆ 1 ವರ್ಷದ ಮಗುವಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸರಿಗೂ ಸೇನೆಯಿಂದ ಮಾಹಿತಿ ಕಳುಹಿಸಲಾಗಿದೆ.
ಡಿ.26ರಂದು ತೆಕ್ಕಟ್ಟೆಯಿಂದ ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular