ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
27

ಮುಲ್ಕಿ : ದೈವಸ್ಥಾನದ ಕಳವು ಪ್ರಕರಣದಲ್ಲಿ ಕಳೆದ ಸುಮಾರು ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ತಮಿಳುನಾಡು ತಿರುಪ್ಪುರ ಜಿಲ್ಲೆ ,ಶಾಸ್ತ್ರೀ ಸ್ಟೀಟ್ ತಿರುಪ್ಪುರ ಗ್ರಾಮ, ನಿವಾಸಿ ನಾಗರಾಜನ್ (38 ) ಎಂದು ಗುರುತಿಸಲಾಗಿದೆ.

ಆರೋಪಿಯು ದೈವಸ್ಥಾನದ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದು ಮುಲ್ಕಿ ಪೊಲೀಸ್ ಠಾಣೆಯ ಅ. ಕ್ರ 70/2018 ಕಲಂ 454,457, 380 ಐಪಿಸಿಪ್ರಕರಣ, ಹಿರಿಯ ಸಿಜೆ ಮತ್ತು ಮೂಡುಬಿದಿರೆ ಜೆ.ಎಂ.ಎಫ್.ಸಿ ನ್ಯಾಯಾಲಯ, ಸಿ ಸಿ ನಂಬರ್ 462/2023 ರ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮುಲ್ಕಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.