ಶಿಕ್ಷಕರಿಗಾಗಿ ಕೃತಕ ಬುದ್ಧಿಮತ್ತೆ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಕ್ರಮ

0
32

ಮೂಡುಬಿದಿರೆ : ಫೋರ್‌ಸೈಟ್ ಲರ್ನಿಂಗ್ ಪ್ರೈವೇಟ್ ಲಿಮಿಟೆಡ್ ಹಾಗೂ ಜಿ-ಟೆಕ್ ಕಂಪ್ಯೂಟರ್ ಎಜುಕೇಶನ್, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರಿಗಾಗಿ “AI Capacity Building Program” ಎಂಬ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮೈಟ್ ಇಂಜಿನಿಯರಿಂಗ್ ಕಾಲೇಜಿನ ಐಎಸ್‌ಇ ವಿಭಾಗದ ಮುಖ್ಯಸ್ಥರಾದ ಪ್ರೊ. ಮಂಜುನಾಥ್ ಹೆಚ್. ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿವಂತೆಯ ಪ್ರಾಮುಖ್ಯತೆಯನ್ನು ವಿವರಿಸಿ, ಶಿಕ್ಷಕರು ಹಾಗೂ ವಿಧ್ಯಾರ್ಥಿಗಳು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ಬದಲಾವಣೆ ತರಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಮುಖ್ಯ ತರಬೇತುದಾರರಾಗಿ ಫೋರ್‌ಸೈಟ್ ಲರ್ನಿಂಗ್ ಪ್ರೈವೇಟ್ ಲಿಮಿಟೆಡ್‌ನ ಸಂಶೋಧನೆ ಮತ್ತು ಅಭಿವೃದ್ಧಿ (R&D) ವಿಭಾಗದ ನಿರ್ದೇಶಕರಾದ ದೀಪಕ್ ರಾಜ್ ಅವರು ಭಾಗವಹಿಸಿ, ಕೃತಕ ಬುದ್ಧಿವಂತೆಯ ಮೂಲಭೂತ ಅಂಶಗಳು, ಶಿಕ್ಷಣ ಕ್ಷೇತ್ರದಲ್ಲಿನ ಅದರ ಬಳಕೆ, ವಿವಿಧ AI ಉಪಕರಣಗಳ ಉಪಯೋಗ ಹಾಗೂ ಪರಿಣಾಮಕಾರಿ ಪ್ರಾಂಪ್ಟಿಂಗ್ ತಂತ್ರಗಳ ಕುರಿತು ಸಮಗ್ರ ತರಬೇತಿ ನೀಡಿದರು. ತರಬೇತಿಯಲ್ಲಿ ಶಿಕ್ಷಕರು ಪ್ರಾಯೋಗಿಕವಾಗಿ ವಿವಿಧ AI ಸಾಧನಗಳನ್ನು ಬಳಸುವ ಅವಕಾಶವನ್ನು ಪಡೆದುಕೊಂಡರು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುರಿಯಾನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಶಿಕ್ಷಕರ ವೃತ್ತಿಪರ ಬೆಳವಣಿಗೆಯಲ್ಲಿ ಕೃತಕ ಬುದ್ಧಿವಂತೆಯ ಮಹತ್ವವನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಫೋರ್‌ಸೈಟ್ ಲರ್ನಿಂಗ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಧೀರಜ್ ಉದ್ಯಾವರ ಹಾಗೂ ಅರುಣ್ ಪಿಂಟೋ ಉಪಸ್ಥಿತರಿದ್ದು ಶುಭ ಕೋರಿದರು.

ಕಾರ್ಯಕ್ರಮವನ್ನು ಮುಖ್ಯಸ್ಥ ಮಧುಸೂದನ್ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡರು. ಭಾಗವಹಿಸಿದ ಶಿಕ್ಷಕರು ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಇಂತಹ ತರಬೇತಿಗಳು ಶಿಕ್ಷಣ ಕ್ಷೇತ್ರದಲ್ಲಿ ಅತ್ಯಂತ ಉಪಯುಕ್ತವಾಗಿವೆ ಎಂದು ಅಭಿಪ್ರಾಯಪಟ್ಟರು.

ವರದಿ ರಾಯಿ ರಾಜ ಕುಮಾರ

LEAVE A REPLY

Please enter your comment!
Please enter your name here