ಅರುಣ್ ಕುಮಾರ್ ಗಟ್ಟಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ದೇಹದಾರ್ಡ್ಯ ಸಂಸ್ಥೆಯ ಕಾರ್ಯಾಧ್ಯಕ್ಷ ಸ್ಥಾನ

0
35

ಬಿಪಿನ್ ರೈ ದಕ್ಷಿಣ ಕನ್ನಡ ಜಿಲ್ಲಾ ದೇಹದಾರ್ಡ್ಯ ಸಂಸ್ಥೆಯ ಗೌರವಾಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ದೇಹದಾರ್ಡ್ಯ ಸಂಸ್ಥೆಯ ನೂತನ ಕಾರ್ಯಾಧ್ಯಕ್ಷರಾಗಿ ಅರುಣ್ ಕುಮಾರ್ ಗಟ್ಟಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಕ್ರೀಡಾ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅರುಣ್ ಕುಮಾರ್ ಗಟ್ಟಿ ಅವರು ದೇಹದಾರ್ಡ್ಯ ಕ್ರೀಡೆಯ ಬೆಳವಣಿಗೆಗೆ ಹಲವು ವರ್ಷಗಳಿಂದ ಶ್ರಮಿಸುತ್ತಿದ್ದಾರೆ. ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹಲವು ಬೃಹತ್ ದೇಹದಾರ್ಡ್ಯ ಸ್ಪರ್ಧೆಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.

ವಿಶೇಷವೆಂದರೆ, ಈ ಸ್ಪರ್ಧೆಗಳ ಆಯೋಜನೆಯಿಂದ ಲಭಿಸುವ ಉಳಿತಾಯದ ಹಣವನ್ನು ವೈಯಕ್ತಿಕವಾಗಿ ಬಳಸದೆ, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಬಡ ಕುಟುಂಬಗಳ ನೆರವು ಹಾಗೂ ನಿರ್ಗತಿಕ ಮಕ್ಕಳ ಶಿಕ್ಷಣಕ್ಕೆ ಧನಸಹಾಯ ನೀಡುತ್ತಾ ಬಂದಿದ್ದಾರೆ.

ದೇಹದಾರ್ಡ್ಯ ಕ್ರೀಡೆಯನ್ನು ಉತ್ತೇಜಿಸುವುದರ ಜೊತೆಗೆ ನೂರಾರು ಯುವಕರು ಹಾಗೂ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಮತ್ತು ಬೆಂಬಲ ನೀಡಿರುವ ಅವರ ಸಾಮಾಜಿಕ ಕಳಕಳಿ ಹಾಗೂ ಸೇವೆಯನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ.

ಅರುಣ್ ಕುಮಾರ್ ಗಟ್ಟಿ ಅವರ ಆಯ್ಕೆಗೆ ಜಿಲ್ಲೆಯ ಕ್ರೀಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದು, ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇಹದಾರ್ಡ್ಯ ಕ್ರೀಡೆ ಮತ್ತಷ್ಟು ಬೆಳವಣಿಗೆ ಕಾಣಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.