ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಅರುಣಕಲಾ ಎಸ್. ರಾವ್ ಸಾಧನೆ

0
17

ಹಿರಿಯಡ್ಕ, : ಗೋವಾದಲ್ಲಿ ನಡೆದ 3ನೇ ನ್ಯಾಷನಲ್ ವುಮೆನ್ಸ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2026 ನಲ್ಲಿ ಹಿರಿಯಡ್ಕದ ಕ್ರೀಡಾಪಟು ಅರುಣಕಲಾ ಎಸ್. ರಾವ್ ಅವರು ಅದ್ಭುತ ಸಾಧನೆ ಮಾಡಿ ಎರಡು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ಗೆದ್ದು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.

ಚಾಂಪಿಯನ್‌ಶಿಪ್‌ನಲ್ಲಿ ಅರುಣಕಲಾ ಅವರು 5000 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಅಲ್ಲದೆ 4×100 ಮೀಟರ್ ರಿಲೇ ಓಟದಲ್ಲೂ ಪ್ರಥಮ ಸ್ಥಾನ ಗಳಿಸಿ ಮತ್ತೊಂದು ಚಿನ್ನದ ಪದಕಕ್ಕೆ ಭಾಜನರಾದರು.

ಇದರ ಜೊತೆಗೆ 1500 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಎರಡು ಬೆಳ್ಳಿ ಪದಕಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಒಟ್ಟು ಎರಡು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ಅರುಣಕಲಾ ಎಸ್. ರಾವ್ ಅವರು ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದು, ಕ್ರೀಡಾ ವಲಯದಿಂದ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ.

LEAVE A REPLY

Please enter your comment!
Please enter your name here