Thursday, July 25, 2024
Homeಪುತ್ತೂರುವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಅರವಿಂದ ಬೋಳಾರ್ ಭೇಟಿ

ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಅರವಿಂದ ಬೋಳಾರ್ ಭೇಟಿ

ಖ್ಯಾತ ತುಳು ಚಿತ್ರನಟ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್ ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರೊಂದಿಗೆ ಸಂವಾದ ನಡೆಸಿದ ಅವರು ತಮ್ಮ ಮಾತುಗಳಿಂದ ಕಾಲೇಜು ಸಿಬ್ಬಂದಿಗಳನ್ನು ನಗೆಗಡಲಲ್ಲಿ ತೇಲಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ ಶೆಟ್ಟಿಗಾರ್ ವಿ. ಮಾತುಗಳನ್ನಾಡಿದರು. ಸಂಸ್ಥೆಯ ಉಪಪ್ರಾಂಶುಪಾಲರಾದ ದೇವೀಚರಣ್ ರೈ ಎಂ. ವಂದಿಸಿದರು. ಕಲಾವಿದ ಬಿ. ಕೆ. ಶೆಟ್ಟಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular