ಉಪ್ಪಿನಂಗಡಿ-ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕಾಂಗ್ರೆಸ್ ಮುಖಂಡ, ಉಪ್ಪಿನಂಗಡಿಯ ಖ್ಯಾತ ವೈದ್ಯ ಡಾ. ರಾಜಾರಾಮ್ ಕೆ.ಬಿ. ನೇಮಕ

0
12

ಪುತ್ತೂರು: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ 128 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ನ.11ರಂದು ರಾತ್ರಿ ಅಧಿಕೃತ ಆದೇಶ ಹೊರಡಿಸಿದೆ. ಈ ನೇಮಕಾತಿ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಕಡಬ, ಬೆಳ್ತಂಗಡಿ ಹಾಗೂ ಬಂಟ್ವಾಳ ಭಾಗದ ಹಲವರಿಗೆ ಅವಕಾಶ ದೊರೆತಿದೆ. ಈ ಪೈಕಿ ಉಪ್ಪಿನಂಗಡಿಯ ಖ್ಯಾತ ದಂತವೈದ್ಯ, ಕಾಂಗ್ರೆಸ್ ಮುಖಂಡ ಡಾ. ರಾಜಾರಾಮ್ ಕೆ.ಬಿ. ಅವರನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಉಪ್ಪಿನಂಗಡಿಯ ಪ್ರತಿಷ್ಠಿತ ಮುಗ್ಗಗುತ್ತು ಮನೆತನದವರಾದ ಡಾ. ರಾಜಾರಾಮ್ ಅವರು ಬಂಟ್ವಾಳ ತಾಲೂಕಿನ ಕಕ್ಯಪದವಿನ ದಿ. ಬಾಬು ಪೂಜಾರಿ ಮತ್ತು ಗಿರಿಜಾ ದಂಪತಿಯ ಪುತ್ರ.