Wednesday, January 15, 2025
Homeದೆಹಲಿಇಸ್ರೋದ ನೂತನ ಅಧ್ಯಕ್ಷರಾಗಿ ವಿ. ನಾರಾಯಣನ್ ನೇಮಕ

ಇಸ್ರೋದ ನೂತನ ಅಧ್ಯಕ್ಷರಾಗಿ ವಿ. ನಾರಾಯಣನ್ ನೇಮಕ

ನವದೆಹಲಿ: ಕೇಂದ್ರ ಸರ್ಕಾರವು ವಿ.ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹೊಸ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.

ಅವರು ಜ. 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಸಂಪುಟದ ನೇಮಕಾತಿ ಸಮಿತಿಯೂ ಈ ಕುರಿತು ಅಧಿಸೂಚನೆ ಹೊರಡಿಸಿದೆ.

ವಿ. ನಾರಾಯಣನ್ ಅವರ ನೇಮಕವು ಜ.14ರಿಂದ ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಲಾಗಿದೆ. ಅವರಿಗೆ ಸುಮಾರು ನಾಲ್ಕು ದಶಕಗಳ ಅನುಭವವಿದೆ. ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.

ಅಲ್ಲದೆ, ಅವರು ರಾಕೆಟ್‌ ಮತ್ತು ಬಾಹ್ಯಾಕಾಶ ನೌಕೆ ಪ್ರೊಪಲ್ಷನ್‌ನಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಅವರು ಜಿಎಸ್‌ಎಲ್‌ವಿ Mk Ill ವಾಹನದ ಸಿ 25 ಕ್ರಯೋಜೆನಿಕ್ ಯೋಜನೆಯ ಯೋಜನಾ ನಿರ್ದೇಶಕರಾಗಿದ್ದರು.

RELATED ARTICLES
- Advertisment -
Google search engine

Most Popular