ತುಳುವ ಮಹಾಸಭೆ ಇಂಟರ್ನ್ಯಾಷನಲ್ ಬ್ರಹ್ಮಾವರ ವಲಯ ಸಂಚಾಲಕಿಯಾಗಿ ಆಶಾ ಎ ಹೆಗ್ಡೆ ಪುನರಾಯ್ಕೆ

0
14

ಬ್ರಹ್ಮಾವರ: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ವತಿಯಿಂದ ಬ್ರಹ್ಮಾವರ ವಲಯದ ಸಂಚಾಲಕಿಯಾಗಿ ಆಶಾ ಎ. ಹೆಗ್ಡೆ ಅವರನ್ನು ಮರು ನೇಮಕ ಮಾಡಲಾಗಿದೆ. ಆರೋಗ್ಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಆಶಾ ಎ. ಹೆಗ್ಡೆ ಅವರು ಶ್ರೀದೇವಿ ಕ್ಲಿನಿಕಲ್ ಲ್ಯಾಬೋರೇಟರಿ, ಶ್ರೀದೇವಿ ಹೆಲ್ತ್ ಕೇರ್ ಮತ್ತು ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಮಂದಾರ್ತಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮಾನವ ಹಕ್ಕುಗಳು ಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಂಸ್ಥೆಯ ಕರ್ನಾಟಕ ಉಪಾಧ್ಯಕ್ಷೆ, ಸಹಕಾರ ಭಾರತಿಯ ಉಡುಪಿ ಜಿಲ್ಲಾ ಮಹಿಳಾ ಪ್ರಮುಖೆ ಸೇರಿದಂತೆ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here