ಆಶಾ ಕಾರ್ಯಕರ್ತೆಯರಿಂದ ರಾಜ್ಯಾದ್ಯಂತ ಅಹೋರಾತ್ರಿ ಧರಣಿ; ಸಾರಿಗೆ ನೌಕರರ ಮುಷ್ಕರ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ಶಾಕ್!

0
10

ಬೆಂಗಳೂರು: ವಿವಿಧ ಬೇಡಿಕೆಗಳು ಆಗ್ರಹಿಸಿ ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಮತ್ತೆ ಅಹೋರಾತ್ರಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದ್ಲಿ ಆಗಸ್ಟ್​ 12 ,13 ಮತ್ತು 14 ಮೂರು ದಿನಗಳ ಕಾಲ ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸಲಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನು?

ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ರೂ.10 ಸಾವಿರ ಗ್ಯಾರಂಟಿಯನ್ನು ಈ ಏಪ್ರಿಲ್ ಇಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು.

2025 ಮಾರ್ಚ್ ರಾಜ್ಯ ಬಜೆಟ್ ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ. 1000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು.

ತರ್ಕಬದ್ದಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಿ. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.

ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು.

ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು.

ನಿವೃತ್ತ ಆರಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು.

ನಗರ ಆತಾಗಳಿಗೆ ರೂ.2000 ಗೌರವಧನ ಹೆಚ್ಚಿಸಬೇಕು.

2025 ಜೂನ್-ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು, ಇತ್ಯಾದಿ.

    LEAVE A REPLY

    Please enter your comment!
    Please enter your name here