ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ಉಡುಪಿ ಜಿಲ್ಲೆ ಆಯೋಜಿಸಿದ 134ನೇ ಅಂಬೇಡ್ಕರ್ ಜಯಂತಿಯ ಭೀಮೋತ್ಸವ ಕಾರ್ಯಕ್ರಮವು ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ನಡೆಯಿತು.
ಬುಡಕಟ್ಟು ಕೊರಗ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲ್ ಇದರ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿರವರಿಗೆ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಭೀಮಸಾರಥಿ ಪ್ರಶಸ್ತಿ ಪ್ರಧಾನ ಮಾಡಿದರು.
ವೇದಿಕೆಯಲ್ಲಿ ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರಿನ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಬೈಂದೂರು, ಸಂಘಟಣೆಯ ಸಂಚಾಲಕರಾದ ಟಿ. ಮಂಜುನಾಥ ಗಿಳಿಯಾರು, ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.