ಮಂಗಳೂರು: ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆಯ ವೇಳೆ ಯುವಕರ ಗುಂಪಿನ ನಡುವೆ ನರ್ತಿಸುತ್ತಿದ್ದ ಯುವತಿಯೊಬ್ಬಳ ಜೊತೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿರುವುದು ಎನ್ನಲಾದ ವಿಡಿಯೋ ಒಂದು ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಧಾರ್ಮಿಕ ಮೆರವಣಿಗೆ ವೇಳೆ ಕೇಸರಿ ಶಾಲು ಧರಿಸಿದ್ದ ಯುವಕ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವುದರ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ಈ ವಿಡಿಯೋ ಎಲ್ಲಿಯದ್ದು ಎಂಬ ಸ್ಪಷ್ಟ ಮಾಹಿತಿ ಇಲ್ಲ.
ಕಾಂಗ್ರೆಸ್ ನಾಯಕಿ ಲಾವಣ್ಯ ಬಲ್ಲಾಳ್ ಜೈನ್ ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಡಿಯೊ ಶೇರ್ ಮಾಡಿದ್ದಾರೆ. ಎಂತಹ ಗುಣವನ್ನು ದಕ್ಷಿಣ ಕನ್ನಡಕ್ಕೆ ಆಮದು ಮಾಡಿಕೊಂಡಿದ್ದೀರಿ? ಯಾವ ರೀತಿಯ ಕೃಷ್ಣಾಷ್ಟಮಿ ಆಚರಣೆ ಇದು? ಎಂದು ಅವರು ಪ್ರಶ್ನಿಸಿದ್ದಾರೆ.
ವೈರಲ್ ವಿಡಿಯೊದಲ್ಲಿ ಯುವಕರ ಗುಂಪಿನ ನಡುವೆ ಒಂಟಿ ಯುವತಿಯೊಬ್ಬಳು ನರ್ತಿಸುತ್ತಿರುತ್ತಾಳೆ. ಈ ವೇಳೆ ಕೇಸರಿ ಶಾಲು ತಲೆಗೆ ಸುತ್ತಿಕೊಂಡಿದ್ದ ವ್ಯಕ್ತಿ ಆಕೆಯನ್ನು ತಬ್ಬಿಕೊಳ್ಳಲು ಯತ್ನಿಸಿದ್ದು, ಅಶ್ಲೀಲವಾಗಿ ನರ್ತಿಸಿದ್ದಾನೆ. ಈ ವೇಳೆ ಯುವತಿ ಆತನನ್ನು ತಳ್ಳಿ ಅಲ್ಲಿಂದ ಬೇರೆಡೆಗೆ ಹೋಗಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ವೀಡಿಯೋ ವೀಕ್ಷಿಸಲು ಲಿಂಕ್ ಕ್ಲಿಕ್ ಮಾಡಿ…