ಕಾಪು: ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಇಂದು (ಏಪ್ರಿಲ್ 03) ಕಾಪು ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಇತ್ತೀಚೆಗಷ್ಟೇ ಬ್ರಹ್ಮಕಲಶ ಉತ್ಸವ ಪೂರೈಸಿರುವ ಹೊಸ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ದರ್ಶನ ಪಡೆದಿದ್ದಾರೆ. ಮಾರಿಯಮ್ಮನ ನವದುರ್ಗ ಲೇಖನ ಪುಸ್ತಕವನ್ನು ಪಡೆದಿದ್ದಾರೆ.