ಬೆಳಗಾವಿ: ಕರ್ತವ್ಯ ನಿರತ ಎಎಸ್ಐ ಇಂದು ದಿಢೀರ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ಮಹಾಲಕ್ಷ್ಮಿದೇವಿ ಜಾತ್ರೆಯ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಎಎಸ್ಐ ಮೀರಾ ನಾಯಕ್ ಹೃದಯಾಘಾತದಿಂದ ಕುಸಿದು ಸಾವನಪ್ಪಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಯಲ್ಲಿ ಶೋಕದ ವಾತಾವರಣವನ್ನು ಸೃಷ್ಟಿಸಿದ್ದು, ಕರ್ತವ್ಯದಲ್ಲಿರುವಾಗಲೇ ಒಬ್ಬ ಸಮರ್ಥ ಅಧಿಕಾರಿಯನ್ನು ಕಳೆದುಕೊಂಡಿರುವುದಕ್ಕೆ ಇಲಾಖೆಯ ಸಿಬ್ಬಂದಿ ದಿಗ್ಭ್ರಮೆಗೊಂಡಿದ್ದಾರೆ.
ಜುಲೈ 5ರಂದು ಬೆಳಗ್ಗೆ 6 ಗಂಟೆ ಸುಮಾರಿಗೆ, ಮೀರಾ ನಾಯಕ್ ಅವರು ತೀವ್ರ ಎದೆನೋವಿನಿಂದ ಕುಸಿದು ಬಿದ್ದರು. ತಕ್ಷಣವೇ ಇತೆ ಸಿಬ್ಬಂದಿ ಅವರನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, ಆದರೆ ವೈದ್ಯರು ಪರೀಕ್ಷಿಸಿದಾಗ ಅವರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದರು.