
ಮಂಗಳೂರು : ಜಪಾನ್ ನ ನಾಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ಕರಾವಳಿಯ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿ ತಾಯ್ನಾಡು ಮಂಗಳೂರಿಗೆ ಮರಳಿದ ಅರ್ಜುನ ಪ್ರಶಸ್ತಿ ವಿಜೇತೆ ಎಂ. ಆರ್. ಪೂವಮ್ಮ ಅವರ ಮನೆಗೆ ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜರವರು ಹಾಗೂ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರವರು ಕಾರ್ಯಕರ್ತರೊಂದಿಗೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.
