ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಕರ ಸಮಸ್ಯೆಗಳನ್ನು ಅರ್ಥೈಸಿಕೊಂಡು ಅದರ ಪರಿಹಾರಕ್ಕಾಗಿ ನಿರಂತರವಾಗಿ ಶ್ರಮಿಸುತ್ತಾ ಬಂದಿದೆ. ಪ್ರಾಥಮಿಕ ಶಿಕ್ಷಣದಲ್ಲಿ ಶಿಕ್ಷಕಿಯರು ಹೆಚ್ಚಿನ ಪ್ರಮಾಣದಲ್ಲಿ ತೊಡಗಿಸಿ ಕೊಂಡು ಮಾತೃ ಹೃದಯದ ಪ್ರೀತಿಯನ್ನು ನೀಡುವಲ್ಲಿ ಯಶಸ್ವಿಯಾಗುತ್ತಾ ಬಂದಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್ವರಿ ಮತ್ತು ಅವರ ತಂಡ ಸಮಸ್ತ ಶಿಕ್ಷಕರ ನೋವು ನಲಿವುಗಳಿಗೆ ಸ್ಪಂದಿಸಿ ಶಿಕ್ಷಕ ಸ್ನೇಹಿಯಾಗಿ ಬೆಳೆಯಲಿ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸುಚರಿತ ಶೆಟ್ಟಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ ಶಿಕ್ಷಕರ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಸಂಘದ ಪದಾಧಿಕಾರಿಗಳಿಗೆ ಸಲಹೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಮಲ್ ನೆಲ್ಯಾಡಿ ಸಂಘಟನೆಯ ಪ್ರಾಮುಖ್ಯತೆ ಮತ್ತು ಜಿಲ್ಲಾ ಸಂಘಟನೆಯ ಕಾರ್ಯ ವೈಖರಿಗಳ ಬಗ್ಗೆ ತಿಳಿಸಿದರು. ಸಮಸ್ಯೆಗಳನ್ನು ಪರಿಹರಿಸುವ ಸಂದರ್ಭದಲ್ಲಿ ಎಲ್ಲ ಶಿಕ್ಷಕ ಸಂಘಟನೆಗಳು ಒಗ್ಗಟ್ಟಿನಿಂದ ನಡೆದುಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು. ಜಿಲ್ಲಾ ಸಹ ಕಾರ್ಯದರ್ಶಿ ಸಂದೇಶ್, ಮೂಡುಬಿದಿರೆ ಶಿಕ್ಷಣ ಸಂಯೋಜಕರಾದ ರಾಜೇಶ್ ಭಟ್, ತಾಲೂಕು ಸರಕಾರಿ ನೌಕರ ಸಂಘದ ಅಧ್ಯಕ್ಷರಾದ ಡಾ. ದೊರೆಸ್ವಾಮ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು ಅಧ್ಯಕ್ಷ ಡಾ. ರಾಮಕೃಷ್ಣ ಶಿರೂರು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಶಿಕಾಂತ ವೈ., ಶಾಲಾ ಶಿಕ್ಷಣ ಇಲಾಖೆ ನೌಕರ ಸಂಘದ ಅಧ್ಯಕ್ಷರಾದ ನಾಗರತ್ನ ಶಿರೂರು, ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ ಕೊಳವಳ್ಳಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿನ್ನಿ ಫ್ರೆಡ್ ಪಿಂಟೋ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಸುಧಾಕರ ಸಾಲ್ಯಾನ್, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಕಾರ್ಯದರ್ಶಿ ನಿತೇಶ್ ಬಲ್ಲಾಳ, ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಶ್ರೀ ಬಾಲಕೃಷ್ಣ ರೇಖ್ಯ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಪದಾಧಿಕಾರಿಗಳಾದ ಮಹದೇವ, ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಉಪಾಧ್ಯಕ್ಷರಾಗಿರುವ ಧರಣೇಂದ್ರ ಜೈನ್, ಅಭಿಮಾನದಿಂದ ಆಗಮಿಸಿದ ಮೂಡುಬಿದರಿ ತಾಲೂಕಿನ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಪತ್ರಿಕಾ ವರದಿಗಾರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಮತ್ತು ತಾಲೂಕು ಅಧ್ಯಕ್ಷರು, ಕಾರ್ಯದರ್ಶಿ , ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಪ್ರಫುಲ ಎಮ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.
ತಾಲೂಕು ಅಧ್ಯಕ್ಷರಾದ ಮಹೇಶ್ವರಿ ಎಲ್ಲರನ್ನು ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷರಾದ ಸುಧಾಕರ್ ಧನ್ಯವಾದ ಸಲ್ಲಿಸಿದರು. ಸಂಘದ ಕೋಶಾಧಿಕಾರಿ ನಾಗರತ್ನ ಶಿರೂರು ಕಾರ್ಯಕ್ರಮ ನಿರ್ವಹಿಸಿದರು.

