Astra Group ಪ್ರಕರಣ : ಮಾನಹಾನಿಕರ ಪೋಸ್ಟ್‌ಗಳಿಗೆ ಮಂಗಳೂರು ನ್ಯಾಯಾಲಯ ಬ್ರೇಕ್

0
132

ಮಂಗಳೂರು : Astra Group ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್‌ಗಳು, ರೀಲ್‌ಗಳು, ವೀಡಿಯೊಗಳು, ಸ್ಟೋರಿಗಳು, ಕಾಮೆಂಟ್‌ಗಳು, ಸುಳ್ಳು ಸುದ್ದಿಗಳು ಅಥವಾ ವದಂತಿಗಳನ್ನು ಪ್ರಕಟಿಸುವುದು, ಮರುಪ್ರಕಟಿಸುವುದು ಹಾಗೂ ಹಂಚಿಕೊಳ್ಳುವುದಕ್ಕೆ ಮಂಗಳೂರಿನ ಮಾನ್ಯ ಪ್ರಧಾನ ಸಿವಿಲ್ ಜಡ್ಜ್ ನ್ಯಾಯಾಲಯವು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

O.S. No. 0001018/2026 ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈ ಮಧ್ಯಂತರ ಆದೇಶ ಹೊರಡಿಸಿದೆ. ಆದೇಶದಂತೆ Astra Group ಕುರಿತು ಮಾನಹಾನಿಕರ, ಸುಳ್ಳು ಅಥವಾ ದಾರಿತಪ್ಪಿಸುವ ಮಾಹಿತಿಯನ್ನು ಯಾವುದೇ ಸಾಮಾಜಿಕ ಜಾಲತಾಣ ಅಥವಾ ಡಿಜಿಟಲ್ ಮಾಧ್ಯಮದಲ್ಲಿ ಪ್ರಕಟಿಸುವುದು, ಮರುಪ್ರಕಟಿಸುವುದು ಅಥವಾ ಹಂಚಿಕೊಳ್ಳುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ನ್ಯಾಯಾಲಯದ ಆದೇಶವನ್ನು ಎಲ್ಲರೂ ಗೌರವಿಸಬೇಕು ಎಂದು ತಿಳಿಸಲಾಗಿದ್ದು, Astra Group ಕುರಿತು ಪರಿಶೀಲಿಸದ, ಸುಳ್ಳು ಅಥವಾ ಮಾನಹಾನಿಕರ ವಿಷಯವನ್ನು ಪ್ರಸಾರ ಮಾಡದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ನಿಷೇಧಿತ ವಿಷಯವನ್ನು ಪ್ರಕಟಿಸುವುದು ಅಥವಾ ಹಂಚಿಕೊಳ್ಳುವವರ ವಿರುದ್ಧ ಸಂಬಂಧಿತ ಕಾನೂನುಗಳಡಿ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಯಾವುದೇ ಮಾಹಿತಿ ಅಥವಾ ಸುದ್ದಿಯನ್ನು ಹಂಚಿಕೊಳ್ಳುವ ಮೊದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿತ ಮೂಲಗಳು ಮನವಿ ಮಾಡಿವೆ.