ಅಥ್ಲೆಟಿಕ್ಸ್: ಬಾಲಕಿಯರ ಸ.ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

0
52


ಉಡುಪಿ ಅಜ್ಜರಕಾಡಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಪ್ರದರ್ಶನ ನೀಡಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದಿದ್ದಾರೆ.
ಪ್ರಥಮ ಪಿಯು ವಿದ್ಯಾರ್ಥಿನಿ ಪೂರ್ಣಿಮಾ ಉದ್ದ ಜಿಗಿತದಲ್ಲಿ ದ್ವಿತೀಯ, ಟ್ರಿಪಲ್ ಜಂಪ್‌ನಲ್ಲಿ ಪ್ರಥಮ ಹಾಗೂ 200ಮೀ.
ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಾನ್ಯ ಆರ್ 400ಮೀ. ಹರ್ಡಲ್ಸ್‌ನಲ್ಲಿ ಪ್ರಥಮ, 400ಮೀ. ಓಟದಲ್ಲಿ ದ್ವಿತೀಯ ಸ್ಥಾನ, ಅನನ್ಯ ಟ್ರಿಪಲ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ, ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದರೆ, ನಿಖಿತಾ 800ಮೀ. ಮತ್ತು 400ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಜಯಲಕ್ಷ್ಮಿ 3000ಮೀ. ಓಟದಲ್ಲಿ ದ್ವಿತೀಯ, 1500ಮೀ. ಮತ್ತು 800 ಮೀ. ಓಟದಲ್ಲಿ ತೃತೀಯ ಸ್ಥಾನ, ರಕ್ಷಿತಾ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಅಶ್ವಿನಿ 200ಮೀ. ಓಟದಲ್ಲಿ ದ್ವಿತೀಯ ಸ್ಥಾನ, ನೈಮಿಷ ಎತ್ತರ ಜಿಗಿತದಲ್ಲಿ ದ್ವಿತೀಯ, ಪೂರ್ಣಿಮಾ, ಮಾನ್ಯ ಆರ್, ನಿಖಿತಾ, ಜಯಲಕ್ಷ್ಮಿ ಮತ್ತು ಅಶ್ವಿನಿ ಅವರನ್ನೊಳಗೊಂಡ ರಿಲೇ ತಂಡ 4100 ಹಾಗೂ 4400ಮೀ. ರಿಲೇಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಅಥ್ಲೆಟಿಕ್ಸ್‌ನಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿ ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವ ತಂಡವನ್ನು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here