ಮಾಣಿ ಒಕ್ಕೂಟದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

0
5

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ .ಸಿ.ಟ್ರಸ್ಟ್. ರಿ. ವಿಟ್ಲ ತಾಲೂಕಿನ ಮಾಣಿ ವಲಯದ ಮಾಣಿ ಒಕ್ಕೂಟದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ ಹಮ್ಮಿಕೊಂಡಿದ್ದು, ತಾಲೂಕು ಜನಜಾಗೃತಿ ವೇದಿಕೆ ಸದಸ್ಯರೂ, ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆದ ಕಿರಣ್ ಹೆಗ್ಡೆ ರವರು ಉದ್ಘಾಟಿಸಿ , ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುವ ಎಲ್ಲಾ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ಸಮಾಜಮುಖಿಯಾಗಿ ಇರುತ್ತದೆ, ನಮ್ಮ ನೆಲದ ಭಾಷೆ, ಸಂಸ್ಕೃತಿಯನ್ನು ನಮ್ಮ ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದರು, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರೂ, ಮಾಣಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ರವರು ಆಟಿ ತಿಂಗಳ ವಿಶೇಷತೆ, ಆಚರಣೆ,, ತಿನ್ನುವ ಆಹಾರಗಳ ಕುರಿತು ಮಾಹಿತಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ದಕ್ಷಿಣ ಕನ್ನಡ 2 ಜಿಲ್ಲೆಯ ನಿರ್ದೇಶಕರಾದ ಬಾಬು ನಾಯ್ಕ ರವರು ಯೋಜನೆಯು ಬೆಳೆದು ಬಂದ ದಾರಿ,ಸಿಗುವ ಸೌಲಭ್ಯಗಳ ಕುರಿತು ವಿವರಿಸಿದರು.

ಮಾಣಿ ವಿದ್ಯಾ ವರ್ಧಕ ಸಂಘದ ಸಂಚಾಲಕರಾದ ಹಾಜಿ ಇಬ್ರಾಹಿಂ ರವರು ಮಹಿಳೆಯರಿಗೆ ಸ್ವಾವಲಂಬಿ ಜೀವನವನ್ನು , ಕುಟುಂಬ ನಿರ್ವಹಣೆ ಬಗ್ಗೆ ತಿಳಿಸಿಕೊಟ್ಟ ಸಂಸ್ಥೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂತಹ ಕಾರ್ಯಕ್ರಮ ಅನುಷ್ಠಾನ ಮಾಡಿದ ಪೂಜ್ಯ ಹೆಗ್ಗಡೆಯವರಿಗೆ ನಾವೆಲ್ಲ ಚಿರಋಣಿ ಗಳಾಗಿರಬೇಕು ಎಂದರು.ಮಾಣೆ ಹೈಸ್ಕೂಲ್ ನ ಮುಖ್ಯ ಶಿಕ್ಷಕರಾದ ಚೆನ್ನಪ್ಪ ಗೌಡ ರವರು ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಣಿ ಒಕ್ಕೂಟದ ಅಧ್ಯಕ್ಷರಾದ ಮಂಜಪ್ಪ ನಾಯ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತನಗಾದ ಪ್ರಯೋಜನಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಮೊದಲು ಮಾಣಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ವಲಯ ಮೇಲ್ವಿಚಾರಕಿ ಆಶಾಪಾರ್ವತಿ ಸಂಘಗಳ ದಾಖಲಾತಿ ನಿರ್ವಹಣೆ, ಪ್ರಗತಿ ರಕ್ಷಾ ಕವಚ , ಪ್ರಗತಿ ನಿಧಿ ಬೇಡಿಕೆ, ಸಂಪೂರ್ಣ ಸುರಕ್ಷಾ ಇತರ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಮಾಹಿತಿ ನೀಡಿದರು . ಸುಜಾತ ಸ್ವಾಗತಿಸಿ,ಪ್ರೇಮ ಧನ್ಯವಾದವಿತ್ತರು. ಸೇವಾ ಪ್ರತಿನಿಧಿ ಲಾಯ್ಲಾಬಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.