ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

0
5

ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
2025-2026 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಗೂ 2025 ನೇ ಸಾಲಿನ ಅಂತಿಮ ಪದವಿಯಲ್ಲಿ ಶೇ. 90 ಮೇಲ್ಪಟ್ಟು ಅಂಕ ಗಳಿಸಿದ ಸಂಘದ ಸದ್ಯಸರ ಮಕ್ಕಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಪ್ರತಿಭಾ ಪುರಸ್ಕಾರದ ಅರ್ಜಿಗಳು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಜು. 15 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here