ಮೂಡಬಿದಿರೆ: ಮೂಡಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ವೀರಮರಣವನ್ನಪ್ಪಿದ ಯೋಧರ ಪೋಸ್ಟರ್ ಗೆ ದೀಪ ಬೆಳಗಿಸಿ ನಮನ ಸಲ್ಲಿಸಲಾಯಿತು. ಮುಖ್ಯ ಅತಿಥಿಯಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರು ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಡಾ. ಪಿ. ಜಿ. ಆರ್. ಸಿಂಧಿಯಾ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಗಿಲ್ ಯುದ್ಧದಲ್ಲಿ ವೀರಮರಣ ಹೊಂದಿದ ಯೋಧರ ತ್ಯಾಗವನ್ನು ಸ್ಮರಿಸಿದ ಅವರು, ಸತ್ಯದ ನಡೆ , ಶಿಸ್ತು, ದೇಶಭಕ್ತಿ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ವಿಧ್ಯಾರ್ಥಿಗಳಿಗೆ ಕರೆ ನೀಡಿದರು. ಅಲ್ಲದೆ ಶಾಲೆಯ ಶಿಸ್ತು ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಶಾಲೆಯಲ್ಲಿ ನಡೆಯುತ್ತಿದ್ದ ಕಬ್ ಮತ್ತು ಬುಲ್ ಬುಲ್ ವಿಭಾಗದ ತೃತೀಯ ಚರಣ ಹಾಗೂ ಸುವರ್ಣಗರಿ ಪರೀಕ್ಷಾ ಕೊಠಡಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾರಾಯಣ ಪಿ. ಎಂ. ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ಆಯುಕ್ತರನ್ನು ಗೌರವಿಸಿದರು. ರೋಟರಿ ಶಿಕ್ಷಣ ಸಂಸ್ಥೆಯ ಸಂಚಾಲಕ ಪ್ರವೀಣ್ ಚಂದ್ರ ಜೈನ್, ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ್ ಭಟ್, ಸಹಾಯಕ ರಾಜ್ಯ ಸಂಘಟನಾ ಆಯುಕ್ತ ಭರತ್ ರಾಜ್ ಕೆ., ಮುಖ್ಯೋಪಾಧ್ಯಾಯನಿ ತಿಲಕಾ ಅನಂತವೀರ್ ಜೈನ್ , ಸಂಯೋಜಕರಾದ ಡೀಲನ್ , ಸುಧೀರ್ ಕುಮಾರ್, ಶಶಿಲತಾ , ಸರಿತಾ, ಪ್ರಫುಲ್ಲ, ಗೈಡ್ ಕ್ಯಾಪ್ಟನ್ ವಿನಯಾ, ಸ್ಕೌಟ್ ಮಾಸ್ಟರ್ ಮೋಹನ್ , ಸ್ಕೌಟ್ ಮಾಸ್ಟರ್ ಜಯಪ್ರಕಾಶ್ , ಆಡಳಿತಾಧಿಕಾರಿ ಪ್ರಫುಲ್ ಡಿಸೋಜ, ಮ್ಯಾನೇಜರ್ ಸತೀಶ್ ಹಾಗೂ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಬನ್ನೀಸ್, ಕಬ್ಸ್ , ಬುಲ್ ಬುಲ್ಸ್ , ಸ್ಕೌಟ್ಸ್ ಹಾಗೂ ಗೈಡ್ಸ್ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಗಿಲ್ ಯುದ್ಧದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು.

