Sunday, July 14, 2024
Homeಅಪರಾಧಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರ ಗುಂಪಿನಿಂದ ದಾಳಿ: ಬಜರಂಗದಳದ ದಿಢೀರ್‌ ಪ್ರತಿಭಟನೆ

ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರ ಗುಂಪಿನಿಂದ ದಾಳಿ: ಬಜರಂಗದಳದ ದಿಢೀರ್‌ ಪ್ರತಿಭಟನೆ

ಧಾರವಾಡ: ಗೋವು ರಕ್ಷಣೆಗೆ ಮುಂದಾದ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಕಾರ್ಯಕರ್ತರ ಮೇಲೆ ಮುಸ್ಲಿಂ ಯುವಕರ ಗುಂಪೊಂದು ದಾಳಿ ನಡೆಸಿದ ಘಟನೆ ನಡೆದಿದೆ. ಸುಮಾರು 30ಕ್ಕೂ ಹೆಚ್ಚು ಮುಸ್ಲಿಂ ಯುವಕರ ಗುಂಪು ಧಾರವಾಡ ಎಪಿಎಂಸಿ ಬಳಿ ಈ ದಾಳಿ ನಡೆಸಿದೆ.
ಘಟನೆಯ ಬಳಿಕ ಶುಕ್ರವಾರ ರಾತ್ರಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಧಾರವಾಡ ಉಪ ನಗರ ಪೊಲೀಸ್‌ ಠಾಣೆಗೆ ಆಗಮಿಸಿ ದಿಢೀರ್‌ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ ಹಳೇ ಎಪಿಎಂಸಿಯಲ್ಲಿ ಅಕ್ರಮವಾಗಿ ಕಟ್ಟಿದ್ದ ಗೋವುಗಳನ್ನು ರಕ್ಷಿಸಲು ತೆರಳಿದ್ದ ಸೋಮಶೇಖರ್‌ ಚೆನ್ನಶೆಟ್ಟಿ ಎಂಬವರ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ. ಹೀಗಾಗಿ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ.
ಬಜರಂಗದಳ, ವಿಹಿಂಪ ಕಾರ್ಯಕರ್ತರ ಪ್ರತಿಭಟನೆ ನಡುವೆ ಸ್ಥಳಕ್ಕೆ ಶಾಸಕ ಅರವಿಂದ ಬೆಲ್ಲದ ಆಗಮಿಸಿ ಪ್ರತಿಭಟನಕಾರರನ್ನು ಬೆಂಬಲಿಸಿದರು. ತಪ್ಪಿತಸ್ಥ ಎಲ್ಲಾ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡು ಶೀಘ್ರವಾಗಿ ಬಂಧಿಸಬೇಕು. ಇಲ್ಲವಾದಲ್ಲಿ ಶನಿವಾರ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

RELATED ARTICLES
- Advertisment -
Google search engine

Most Popular