ಬೆಂಗಳೂರು: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿಗಳ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರು. ಪ್ರಮುಖ ಆರೋಪಿ ಫರ್ಮಾನ್, ಸಮೀರ್ ಎಂದು ಈ ಬಗ್ಗೆ ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್ ಹೇಳಿದ್ದಾರೆ. ತನಿಖೆ ಮುಂದುವರಿದಿದೆ. ಬೇರೆ ಯಾರಾದರೂ ಭಾಗಿಯಾಗಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಆರೋಪಿಗಳು ಹೋಗುತ್ತಿರಬೇಕಾದರೆ ಕಾರನ್ನು ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಾಸ್ ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಗಾಂಜಾ ನಶೆಯಲ್ಲಿ ಗಲಾಟೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ವಿದ್ಯಾರಣ್ಯಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.