ಚಂಡೀಗಢ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿಯಿಂದ ಸಂಸದೆಯಾಗಿ ಆಯ್ಕೆಯಾಗಿರುವ ಬಾಲಿವುಡ್ ನಟಿ ಕಂಗನಾ ಮೇಲೆ ವಿಮಾನ ನಿಲ್ದಾಣದಲ್ಲಿ ಹಲ್ಲೆಯಾಗಿದೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಪೇದೆ ಹಲ್ಲೆ ಮಾಡಿರುವುದಾಗಿ ತಿಳಿದುಬಂದಿದೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ.
ಬೋರ್ಡಿಂಗ್ ವೇಳೆ ಸಿಐಎಸ್‌ಎಫ್ ಪೇದೆ ಕುಲ್ವಿಂದರ್ ಕೌರ್ ನೂತನ ಸಂಸದೆ ಕಂಗನಾ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆಯಿಂದ ವಿಮಾನ ನಿಲ್ದಾಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.