Sunday, July 14, 2024
Homeರಾಜಕೀಯಶಾಸಕ ಹರೀಶ್ ಪೂಂಜಾ ಬಂಧನ ಯತ್ನ ರಾಜ್ಯ ಸರ್ಕಾರದ ಹತಾಶೆಯ ಪ್ರತೀಕ : ಡಾ...

ಶಾಸಕ ಹರೀಶ್ ಪೂಂಜಾ ಬಂಧನ ಯತ್ನ ರಾಜ್ಯ ಸರ್ಕಾರದ ಹತಾಶೆಯ ಪ್ರತೀಕ : ಡಾ ಧನಂಜಯ ಸರ್ಜಿ

ಬಿಜೆಪಿ ಯುವಮೋರ್ಚಾ ಮುಖಂಡನ ವಿರುದ್ಧ ರಾಜಕೀಯ ಪ್ರೇರಿತ ಪ್ರಕರಣ ದಾಖಲು ಮಾಡಿ ಬಂಧಿಸಿದನ್ನು ವಿರೋಧಿಸಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸ್ ಹಾಕಿ ಬಂಧಿಸಲು ಯತ್ನಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರದ ಹತಾಶ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹೇಳಿದ್ದಾರೆ.ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ರಾಜ್ಯದಾದ್ಯಂತ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆಯ ಮೂಲಕ ಸುಳ್ಳು ಕೇಸುಗಳನ್ನು ದಾಖಲಿಸಿ ಮಾನಸಿಕ ಸ್ಥೈರ್ಯ ಕುಗ್ಗಿಸುವ ತಂತ್ರ ನಡೆಸುತ್ತಿದೆ.ಪಕ್ಷದ ಕಾರ್ಯಕರ್ತರ ಪರವಾಗಿ ಪೊಲೀಸ್ ಠಾಣೆಗೆ ಆಗಮಿಸಿ ಪ್ರಶ್ನಿಸಿದ ಶಾಸಕರ ವಿರುದ್ಧವೇ ಕೇಸ್ ದಾಖಲಿಸುವ ಮೂಲಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೆಣ್ಣು ಮಕ್ಕಳ ಹತ್ಯೆ ನಡೆಯುತ್ತಿದ್ದರೂ ಯಾವುದೇ ಕಠಿಣ ಕ್ರಮ ಕೈಗೊಳ್ಳಲು ಮುಂದಾಗದ ಗೃಹ ಇಲಾಖೆ, ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಮಾತ್ರ ವಿಶೇಷ ಆಸಕ್ತಿ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular