ಮೂಡುಬಿದಿರೆಯಲ್ಲಿ ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ..!

0
53

ಮೂಡುಬಿದಿರೆ : ವಿದ್ಯಾರ್ಥಿನಿಯೊಬ್ಬಳ ಮಾನಭಂಗಕ್ಕೆ ಯತ್ನಿಸಿದ ಆರೋಪದಡಿ ವಿವಾಹಿತ ವ್ಯಕ್ತಿಯ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.

ಶಿರ್ತಾಡಿಯ ಕಜೆ ಪ್ರದೇಶದ ನಿವಾಸಿ ಲೋಕೇಶ್ ಎಂಬಾತ ಈ ಪ್ರಕರಣದ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ದೂರಿನ ಪ್ರಕಾರ, ಆರೋಪಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಮೂಡುಬಿದಿರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಮುಂದುವರಿದಿದೆ.

LEAVE A REPLY

Please enter your comment!
Please enter your name here