ಮಾದಕ ವಸ್ತು ಮಾರಾಟ ಯತ್ನ : ಕೊಕ್ಕಡ ನಿವಾಸಿ ಯಾಹ್ಯಾ ಸೆರೆ

0
87

ಪುತ್ತೂರು : ಉಪ್ಪಿಂಗಡಿ ಸಮೀಪದ ಪಂಜಳದಲ್ಲಿ ಮಾದಕ ವಸ್ತು ಎಂ.ಡಿ.ಎಂ.ಎ. ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಕೊಕ್ಕಡ ನಿವಾಸಿ ಯಾಹ್ಯಾ ಎಂಬಾತನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿ ಗ್ರಾಮದ ಪಂಜಳದಲ್ಲಿ ಹಗಲು ರೌಂಡ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ಯಹ್ಯಾ ಕೊಕ್ಕಡ (48) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಮಾರಾಟ ಉದ್ದೇಶದಿಂದ ಎಂ.ಡಿ.ಎಂ.ಎ. ಹೊಂದಿರುವುದನ್ನು ಒಪ್ಪಿಕೊಂಡಿದ್ದಾನೆ.

ಪಂಚರ ಸಮ್ಮುಖದಲ್ಲಿ ನಡೆಸಿದ ಮಹಜರಿನಲ್ಲಿ 3,000 ರೂಪಾಯಿ ಮೌಲ್ಯದ 2.16 ಗ್ರಾಂ. ಎಂ.ಡಿ.ಎಂ.ಎ. 45 ಸಾವಿರ ರೂಪಾಯಿ ಮೌಲ್ಯದ ಒಂದು ಐಫೋನ್, ಒಂದು ಸಾವಿರ ರೂ. ಮೌಲ್ಯದ ಒಂದು ಸ್ಯಾಂಗ್ ಕೀ-ಪ್ಯಾಡ್ ಮೊಬೈಲ್ ಸೇರಿದಂತೆ ಒಟ್ಟು 49,000 ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ. 19/2026ರಂತೆ ಕಲಂ 8(ಸಿ), 22(ಬಿ) ಎನ್‌ಡಿಪಿಎಸ್ ಕಾಯ್ದೆಯಂತೆ ಪ್ರಕರಣದ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here