ಉಡುಪಿ: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಆಶ್ರಯದಲ್ಲಿ ರೈತರ ಅನುಕೂಲಕ್ಕಾಗಿ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಅ. 11 ಮತ್ತು 12ರಂದು ಎರಡು ದಿನಗಳ ಕೃಷಿ ಮೇಳ-&2025 ಆಯೋಜಿಸಲಾಗಿದೆ ಎಂದು ಕೃಷಿ ಡಿಪ್ಲೊಮಾ ಕಾಲೇಜು ಪ್ರಾಂಶುಪಾಲ ಡಾ. ಸುಧೀರ್ ಕಾಮತ್ ಹೇಳಿದರು.
ಕೃಷಿ ವಸ್ತು ಪ್ರದರ್ಶನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಲಿದ್ದಾರೆ. ಕೃಷಿಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಆರ್. ಹೆಬ್ಬಾಳಕರ್ ಉದ್ಘಾಟಿಸಲಿದ್ದಾರೆ. ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಮುಖ್ಯ ಅತಿಥಿಗಳಾಗಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿಯ ಶಾಸಕರಾದ ಶ್ರೀ ಯಶಪಾಲ್ ಎ. ಸುವರ್ಣ ವಹಿಸಲಿದ್ದಾರೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ. ಆರ್. ಸಿ. ಜಗದೀಶ್, ಸಂಶೋಧನಾ ನಿರ್ದೇಶಕ ಡಾ. ಬಿ. ಎಂ. ದುಷ್ಯಂತ ಕುಮಾರ್ ಮತ್ತು ಕೃಷಿ ವಿಸ್ತರಣಾ ನಿರ್ದೇಶಕ ಡಾ. ಜಿ.ಕೆ. ಗಿರಿಜೇಶ್ ಭಾಗವಹಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ವಿ. ಸುನಿಲ್ ಕುಮಾರ್, ಎಸ್. ಎಲ್. ಭೋಜೇಗೌಡ, ಗುರುರಾಜ ಶೆಟ್ಟಿ, ಗಂಟಿಹೊಳೆ , ಎ. ಕಿರಣ ಕುಮಾರ ಕೊಡ್ಗಿ, ಗುಮೇರ್ ಸುರೇಶ ಶೆಟ್ಟಿ, ಮಂಜುನಾಥ ಭಂಡಾರಿ , ಡಾ. ಧನಂಜಯ ಸರ್ಜಿ , ಕಿಶೋರ್ ಕುಮಾರ್ ಪುತ್ತೂರು, ಚಾಂತಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರೇಮ ಆರ್. ಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಜಿಪಂ ಸಿಇಒ ಪ್ರತಿಕ್ ಬಾಯಲ್, ಎಸ್ಪಿ ಹರಿರಾಮ್ ಶಂಕರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮ ಜಿ. ಸಿ. ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.
ಕೃಷಿ ವಿಜ್ಞಾನಿಗಳಾದ ಬಿ. ಧನಂಜಯ್, ಡಾ. ಶಂಕರ್ ಉಪಸ್ಥಿತರಿದ್ದರು.