ಆ.2 : ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

0
5

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ನೇತೃತ್ವದಲ್ಲಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ, ಅಂಬಲಪಾಡಿ ಇದರ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ‘ಭಜನೋತ್ಸವ 2026’ ಕಾರ್ಯಕ್ರಮವು ಆಗಸ್ಟ್ 2, ರವಿವಾರ ಬೆಳಿಗ್ಗೆ ಗಂಟೆ 9.00ರಿಂದ ಶ್ರೀ ದೇವಳದ ‘ಶ್ರೀ ಭವಾನಿ ಮಂಟಪ’ದಲ್ಲಿ ನಡೆಯಲಿದೆ.

ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆಯಲ್ಲಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ. ಬೀ. ವಿಜಯ ಬಲ್ಲಾಳ್ ‘ಭಜನೋತ್ಸವ’ವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಇದರ ಜಿಲ್ಲಾ ನಿರ್ದೇಶಕ ಬಿ. ನಾಗರಾಜ ಶೆಟ್ಟಿ, ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ಸಾಯಿರಾಧ ಸಮೂಹ ಸಂಸ್ಥೆಗಳ ಚೇರ್ಮನ್ ಮನೋಹರ್ ಎಸ್. ಶೆಟ್ಟಿ, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘ(ರಿ.) ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಜನ ಜಾಗೃತಿ ವೇದಿಕೆ ಉಡುಪಿ ತಾಲೂಕು ಅಧ್ಯಕ್ಷ ರಾಜು ಪೂಜಾರಿ ಉಪ್ಪೂರು ಭಾಗವಹಿಸಲಿದ್ದು, ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್, ಭಜನಾ ಪರಿಷತ್ ತಾಲೂಕು ಪ್ರಧಾನ ಕಾರ್ಯದರ್ಶಿ ಎ. ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ಪೂರ್ಣಿಮಾ ಪೆರ್ಡೂರು, ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ರವೀಂದ್ರ ಎಸ್. ಹಾಗೂ ಭಜನಾ ಪರಿಷತ್ ತಾಲೂಕು ಪದಾಧಿಕಾರಿಗಳು ಮತ್ತು ವಲಯಗಳ ಸಂಯೋಜಕರು ಉಪಸ್ಥಿತರಿರುವರು.

ಬೆಳಿಗ್ಗೆ ಗಂಟೆ 8.30ಕ್ಕೆ ನೊಂದಾವಣೆ ಮತ್ತು ಉಪಹಾರ, 9.00ಕ್ಕೆ ಉದ್ಘಾಟನೆ, 10.00ರಿಂದ ‘ಭಜನೋತ್ಸವ’ ನಡೆಯಲಿದೆ. 11.45ಕ್ಕೆ ಮಂಗಲ, ಮಧ್ಯಾಹ್ನ ಗಂಟೆ 12.00ಕ್ಕೆ ದೇವಸ್ಥಾನದಲ್ಲಿ ಮಹಾ ಪೂಜೆ, 12.30ಕ್ಕೆ ಅನ್ನ ಪ್ರಸಾದ ವಿತರಣೆಯೊಂದಿಗೆ ‘ಭಜನೋತ್ಸವ’ ಸಮಾಪನಗೊಳ್ಳಲಿದೆ.

ಉಡುಪಿ ತಾಲೂಕು ವ್ಯಾಪ್ತಿಯ ಸಮಸ್ತ ಭಜನಾ ಮಂಡಳಿಗಳು ಕ್ಲಪ್ತ ಸಮಯದಲ್ಲಿ ಉಪಸ್ಥಿತರಿದ್ದು, ಹೆಸರನ್ನು ನೊಂದಾಯಿಸಿ, ಭಾಗವಹಿಸಿ, ‘ಭಜನೋತ್ಸವ’ವನ್ನು ಯಶಸ್ವಿಗೊಳಿಸಬೇಕು ಎಂದು ಭಜನಾ ಪರಿಷತ್ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.