ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಕವಿತೆ, ಭಾವಗೀತೆ ಹಾಗೂ ಹಾಡುಗಳನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಚಯಿಸುವ ಹಾಗೂ ವಿದ್ಯಾರ್ಥಿಗಳ ಮೂಲಕ ಪ್ರಸ್ತುತಪಡಿಸುವ ‘ಡೆನ್ನ ಡೆನ್ನಾನ – ಪದ ಪನ್ಕನ’ ತುಳು ಪದರಂಗಿತ ಅಭಿಯಾನವನ್ನು ಹಮ್ಮಿಕೊಂಡಿದೆ.
‘ಡೆನ್ನ ಡೆನ್ನಾನ – ಪದ ಪನ್ಕನ’ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಆಗಸ್ಟ್ 22 ರ ಶುಕ್ರವಾರ ಅಪರಾಹ್ನ 2.00 ಗಂಟೆಗೆ ನಡೆಯಲಿದೆ.
ಸಿನಿಮಾ ಹಾಗೂ ನಾಟಕ ಕಲಾವಿದೆ ರೂಪಶ್ರೀ ವರ್ಕಾಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು.ಹಿರಿಯ ಗಾಯಕ ಹಾಗೂ ಸಂಗೀತ ನಿರ್ದೇಶಕರಾದ ತೋನ್ಸೆ ಪುಷ್ಕಳ ಕುಮಾರ್ ಮತ್ತು ಗಾಯಕಿ ಹಾಗೂ ಸಂಗೀತ ಶಿಕ್ಷಕಿಯಾದ ಶ್ರೀಮತಿ ವಾಣಿ ಸಪ್ರೆ ಸಂಪನ್ಮೂಲ ಕಲಾವಿದರಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸುವರು. ಸೋಮೇಶ್ವರ ಪುರಸಭೆ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ , ಸದಸ್ಯರಾದ ದೀಪಕ್ ಪಿಲಾರ್, ಆನಂದಾಶ್ರಮ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜೀವನ್ ಸೋಮೇಶ್ವರ, ಕೊಲ್ಯ ಶಾರದಾ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಮೋಹನ್ ಶೆಟ್ಟಿ, ಯಕ್ಷಗಾನ ಕಲಾವಿದ ಕುಸುಮಾಕರ ಕುಂಪಲ ಅತಿಥಿಯಾಗಿ ಭಾಗವಹಿಸುವರು. ಆನಂದಾಶ್ರಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗುರುಮೂರ್ತಿ ಪಿ. ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

