ಆ. 29; ಧರ್ಮಸ್ಥಳದಲ್ಲಿ ರಾಜ್ಯದ ಜೈನಮಠಗಳ ಸ್ವಾಮೀಜಿಗಳ ಸಮಾಗಮ-ಧರ್ಮಸಂರಕ್ಷಣಾ ಜಾಥಾ

0
48

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಆ. 29ರಂದು ಶುಕ್ರವಾರ ಪೂರ್ವಾಹ್ನ ಹನ್ನೊಂದು ಗಂಟೆಯಿಂದ ಧರ್ಮಸಂರಕ್ಷಣಾ ಜಾಥಾ ನಡೆಯಲಿದ್ದು , ರಾಜ್ಯದ ಎಲ್ಲಾ ಜೈನಮಠಗಳ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ.

ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕರ ಸ್ವಾಮೀಜಿ, ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಹೊಂಬುಜ ಜೈನಮಠದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ, ಕನಕಗಿರಿ ಜೈನಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ, ಅರಹಂತಗಿರಿ ಜೈನಮಠದ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ, ಕಂಬದಹಳ್ಳಿ ಜೈನಮಠದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಹೊಂಬುಜ ಜೈನಮಠದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ, ವರೂರು ಜೈನಮಠದ ಧರ್ಮಸೇನ ಭಟ್ಟಾರಕ ಸ್ವಾಮೀಜಿ, ಜಿನಕಂಚಿಮಠದ ಲಕ್ಷ್ಮೀಶ ಸೇನ ಭಟ್ಟಾರಕ ಸ್ವಾಮೀಜಿ, ಸೋಂದಾ ಸ್ವಾದಿ ಜೈನಮಠದ ಭಟ್ಟಾಕಲಂಕ ಸ್ವಾಮೀಜಿ, ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿಮಠದ ಲಕ್ಷ್ಮೀಶಾ ಸೇನ ಭಟ್ಟಾರಕ ಸ್ವಾಮೀಜಿ, ಮಂಡ್ಯದ ಆರತಿಪುರ ಜೈನಮಠದ ಸಿದ್ಧಾಂತಕೀರ್ತಿ ಭಟ್ಟಾರಕ ಸ್ವಾಮೀಜಿ, ಲಕ್ಕವಳ್ಳಿ ಜೈನಮಠದ ವೃಷಭಸೇನ ಭಟ್ಟಾರಕ ಸ್ವಾಮೀಜಿ ಮತ್ತು ಶ್ರವಣಬೆಳಗೊಳ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.

ಪೂರ್ವಾಹ್ನ ಹತ್ತು ಗಂಟೆಗೆ ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶ ದ್ವಾರದ ಬಳಿ ಪೂಜ್ಯ ಭಟ್ಟಾರಕರುಗಳನ್ನು ಭಕ್ತಿಪೂರ್ವಕ ಸ್ವಾಗತಿಸಿ ಬಳಿಕ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಭಟ್ಟಾರಕರುಗಳಿಂದ ಮಂಗಲ ಪ್ರವಚನ ಕಾರ್ಯಕ್ರಮವಿದೆ. ಸುಮಾರು ಹತ್ತು ಸಾವಿರ ಮಂದಿ ಶ್ರಾವಕರು, ಶ್ರಾವಿಕೆಯರು ಸಮಾರಂಭದಲ್ಲಿ ಭಾಗವಹಿಸುವರು.

LEAVE A REPLY

Please enter your comment!
Please enter your name here