ಆ.3: ಸುರತ್ಕಲ್ ಬಂಟರ ಸಂಘದಲ್ಲಿ “ಆಟಿದ ಪೊರ್ಲು” ಅಭಿನಂದನಾ ಕಾರ್ಯಕ್ರಮ

0
41

ಸುರತ್ಕಲ್: ಬಂಟರ ಸಂಘ (ರಿ.) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ “ಆಟಿದ ಪೊರ್ಲು” ಮತ್ತು ಅಭಿನಂದನಾ ಕಾರ್ಯಕ್ರಮ ಆಗೋಸ್ಟ್ 3 ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮುಂಬೈ ವಿ.ಕೆ ಗ್ರೂಪ್ಸ್ ನ ಆಡಳಿತ ನಿರ್ದೇಶಕ, ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಚೇರ್ಮೆನ್ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ.
ಮೊಂಟೆಪದವು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲರಾದ ಡಾ ಮಂಜುಳಾ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ದ.ಕ. ಜಿಲ್ಲಾ ಬಸ್ಸು ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ, ಅಡ್ಯಾರ್ ಗುತ್ತು, ಹೆಜಮಾಡಿ ಶಾರದಾ ಡೆವಲಪರ್ಸ್ ನ ಮಾಲಕ ಪ್ರೇಮ್ ನಾಥ್ ಎಂ ಶೆಟ್ಟಿ, ಮಲ್ಲಿಕಾ ಯಶವಂತ ಶೆಟ್ಟಿ ಬಳ್ಕುಂಜೆಗುತ್ತು ಬಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ವಹಿಸಲಿದ್ದಾರೆ. ಮಹಿಳಾ ವೇದಿಕೆಯ ಅಧ್ಯಕ್ಷೆ ಸರೋಜ ಟಿ ಶೆಟ್ಟಿ ಉಪಸ್ಥಿತರಿರುವರು.
ಸಾಧನೆಗೈದವರಿಗೆ ಸನ್ಮಾನ
ಸಮಾರಂಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಂತೋಷ್ ಕುಮಾರ್ ಎಸ್ ಶೆಟ್ಟಿ ಕುತ್ತೆತ್ತೂರು, ಸಹಕಾರ ಕ್ಷೇತ್ರದಲ್ಲಿ ವಿನಯಕುಮಾರ್ ಸೂರಿಂಜೆ, ಸಾಹಿತ್ಯ-ಶಿಕ್ಷಣ ಕ್ಷೇತ್ರದಲ್ಲಿ ಜ್ಯೋತಿ ಚೇಳಾರ್, ಮಾಧ್ಯಮ‌ ಕ್ಷೇತ್ರದಲ್ಲಿ ಲೋಕೇಶ್ ಸುರತ್ಕಲ್, ದೈವಾರಾಧನೆ ಕ್ಷೇತ್ರದಲ್ಲಿ ಭೋಜ ಪಾತ್ರಿ ಮಧ್ಯ ಅವರನ್ನು ಸನ್ಮಾನಿಸಲಾಗುವುದು.
ಬೆಳಿಗ್ಗೆ 9.30 ರಿಂದ ಗ್ರಾಮವಾರು ಜಾನಪದ ನೃತ್ಯ, ರೂಪಕ ನಡೆಯಲಿದೆ. ಪುರುಷರಿಗೆ ತೆಂಗಿನಕಾಯಿ ಕುಟ್ಟುವುದು, ಮುಂಡಾಸು ಕಟ್ಟುವುದು, ಮಹಿಳೆಯರಿಗೆ ಹಿಡಿಸೂಡಿ ತಯಾರಿಸುವುದು, ಮಡಲು ಹೆಣೆಯುವುದು ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 2 ಗಂಟೆಗೆ ದಿನೇಶ್ ಅತ್ತಾವರ ನಿರ್ದೇಶನದಲ್ಲಿ ರಂಗಚಲನ ಕಲಾವಿದರಿಂದ ತುಳುನಾಡಿನ ಸೌಹಾರ್ದ ಪರಂಪರೆನ್ನು ಬಿಂಬಿಸುವ “ಜಾಗ್೯ತೆ” ತುಳು ಕಿರುನಾಟಕ ಪ್ರದರ್ಶನಗೊಳ್ಳಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here