ಮಂಗಳೂರು ದಕ್ಷಿಣ ಕನ್ನಡ ಖಾಸಗಿ ಬಸ್ಸು ಮಾಲಕರ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಭಾಗಿ ತ್ವದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣಾ ಕಾರ್ಯಕ್ರಮ ಆಗಸ್ಟ್ 6 ರಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನ ದಲ್ಲಿ ನಡೆಯಲಿದೆ.
ಮಂಗಳೂರು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ದಿನೇಶ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್. ಕೆ ಬಸ್ ಪಾಸ್ ವಿತರಣೆ ಮಾಡಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಆಝೀಜ್ ಪರ್ತಿಪ್ಪಾಡಿ, ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮ್ ಫಾರೂಕಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಗೌರವ ಉಪಸ್ಥಿತರಿರುತ್ತಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.