ಮುಂಬೈ: ಕುಡಿಯುವ ನೀರಿನಲ್ಲಿ ಅಮಲು ಪದಾರ್ಥ ಸೇರಿಸಿ 19 ವರ್ಷದ ಟ್ರೈನಿ ನರ್ಸ್ ಮೇಲೆ ಆಟೊ ಚಾಲಕನೊಬ್ಬ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಟ್ರೈನಿ ನರ್ಸ್ ಆಟೊದಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಚಾಲಕ ನೀರು ಬೇಕಾ ಎಂದು ಕೇಳಿದ್ದು, ನೀರು ಕುಡಿದ ಮೇಲೆ ಆಕೆ ಪ್ರಜ್ಞೆ ಕಳೆದುಕೊಂಡಿದ್ದಳು. ಆಟೊ ಚಾಲಕ ನೀರಿಗೆ ಮತ್ತು ಬರಿಸುವ ಪದಾರ್ಥ ಸೇರಿಸಿರುವುದಾಗಿ ತಿಳಿದುಬಂದಿದೆ.
ಪ್ರಜ್ಞೆ ತಪ್ಪಿದ ನರ್ಸ್ ಅನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿರುವುದಾಗಿ ತಿಳಿದುಬಂದಿದೆ. ಪ್ರಜ್ಞೆ ಬಂದ ಬಳಿಕ ಆಕೆ ಮನೆಯವರಿಗೆ ವಿಷಯ ತಿಳಿಸಿದ್ದು, ನಂತರ ದೂರು ದಾಖಲಾಗಿದೆ. ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸುತ್ತಿದ್ದು, ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆದಿದೆ. ನರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಬಗ್ಗೆ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಾತ್ರಿಯೇ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆದಿದೆ. ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯ ಕೇಳಿಬಂದಿದೆ.