ಮಂಗಳೂರು: ಸೆಂಟ್ರಲ್ ರೈಲ್ವೆ ಸ್ಟೇಶನ್ ನಲ್ಲಿ ಪ್ರಯಾಣಿಕರು, ರಿಕ್ಷಾ ಚಾಲಕರ ನಡುವೆ ಗಲಾಟೆ; ವಿಡಿಯೋ ವೈರಲ್

0
426

ಮಂಗಳೂರು: ರೈಲ್ವೆ ಪ್ರಯಾಣಿಕರು ಮತ್ತು ರಿಕ್ಷಾ ಚಾಲಕರ ನಡುವೆ ತಳ್ಳಾಟ, ನೂಕಾಟ ಸೆಂಟ್ರಲ್ ರೈಲ್ವೆ ಸ್ಟೇಷನ್ ನಲ್ಲಿ ಬುಧವಾರ ನಡೆದಿದೆ. ಮಹಿಳೆಯರು ಎಂಬುದನ್ನು ನೋಡದೇ ಅಸಭ್ಯವಾಗಿ ವರ್ತಿಸಿರುವುದು ಕೇಳಿಬಂದಿದೆ. ಸೆಂಟ್ರಲ್ ರೈಲ್ವೆ ನಿಲ್ದಾಣದ ಹೊರಗೆ ನಡೆದ ಹೊಡೆದಾಟ ಮತ್ತು ತೀವ್ರ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಇಂದು ಬೆಳಿಗ್ಗೆ ಚೆನ್ನೈನಿಂದ ದಂಪತಿ ಬಂದಿದ್ದಾರೆ. ಅವರನ್ನು ಕರೆದೊಯ್ಯಲು ದ್ವಿಚಕ್ರವಾಹನದಲ್ಲಿ ಇಬ್ಬರು ಬಂದಿದ್ದರು. ರೈಲ್ವೆ ನಿಲ್ದಾಣದಲ್ಲಿ ಪ್ರಸ್ತುತ ವ್ಯವಸ್ಥೆಯ ಪ್ರಕಾರ, ನಿಗದಿತ ಸ್ಥಳಗಳಲ್ಲಿ ಮಾತ್ರ ಪಾರ್ಕಿಂಗ್ ಮಾಡಬೇಕು. ಎಲ್ಲಾ ಪ್ರಯಾಣಿಕರ ಅನುಕೂಲಕ್ಕಾಗಿ ವಿಸ್ತೃತ ಸಮಯವನ್ನು ಕಾಯದೆ ಮುಖ್ಯ ಗೇಟ್ ನ ಮುಂದೆ ಪಿಕಪ್ ಮತ್ತು ಡ್ರಾಪ್ ಗೆ ಮಾತ್ರ ಅನುಮತಿಸಲಾಗುತ್ತದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಪಾರ್ಕಿಂಗ್ ನೋಡಿಕೊಳ್ಳುವ ಚಂದನ್ ಎಂಬ ವ್ಯಕ್ತಿ ಮತ್ತು ದಂಪತಿಯನ್ನು ಕರೆದುಕೊಂಡು ಹೋಗಲು ಬಂದ ಇಬ್ಬರು ವ್ಯಕ್ತಿಗಳ ನಡುವೆ ಸಣ್ಣ ಮಟ್ಟದ ವಾಗ್ವಾದ ನಡೆದಿದೆ. ನಂತರ ಚಂದನ್ ಗೆ ಬೆಂಬಲಿಸಿ ಆಟೊ ರಿಕ್ಷಾ ಮಧ್ಯಪ್ರವೇಶಿಸಿದ್ದಾರೆ. ಇದು ವಾಗ್ವಾದ ತೀವ್ರತೆ ಪಡೆದುಕೊಳ್ಳಲು ಕಾರಣವಾಗಿದೆ. ಈ ವೇಳೆ ನೂಕಾಟ ತಳ್ಳಾಟ ನಡೆದಿದೆ.

ಆಟೊ ಚಾಲಕರ ಗುರುತನ್ನು ಪರಿಶೀಲಿಸಲಾಗಿದೆ. ಪ್ರಯಾಣಿಕರ ಗುರುತನ್ನೂ ಪರಿಶೀಲಿಸಲಾಗುತ್ತಿದೆ. ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮೀಶನರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here