
ಹೆಬ್ರಿ: ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆಯಲಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಹೆಬ್ರಿಯ ಪಿ.ಆರ್.ಎನ್. ಅಮೃತಭಾರತಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅವನಿಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರದರ್ಶಿಸಲು ಅವಕಾಶ ಪಡೆದಿರುವ ಅವನಿಕೆ ಅವರ ಸಾಧನೆಯು ಕಾಲೇಜಿಗೆ ಹೆಮ್ಮೆ ತಂದಿದೆ. ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡೆಗೂ ಆದ್ಯತೆ ನೀಡುತ್ತಿರುವ ಅಮೃತಭಾರತಿ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ನಿರಂತರ ಪ್ರೋತ್ಸಾಹ ನೀಡುತ್ತಿದೆ.
ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸುವ ಸಂಸ್ಥೆಯ ಪ್ರಯತ್ನಕ್ಕೆ ಅವನಿಕೆ ಅವರ ಆಯ್ಕೆಯು ಮತ್ತೊಂದು ಹೆಮ್ಮೆಯ ಸಾಧನೆಯಾಗಿದೆ. ಅವರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಗ್ವಾಲಿಯರ್ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಗಳಿಸುವ ಮೂಲಕ ಸಂಸ್ಥೆಗೆ ಮತ್ತಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
