ಜುಲೈ 25, 26 ರಂದು ಕಲಾಕುಂಚದಿಂದ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ

0
14

ದಾವಣಗೆರೆ : ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ಮಕ್ಕಳಿಗೆ“ಕನ್ನಡ ಕೌಸ್ತುಭ” “ಸರಸ್ವತಿ ಪುರಸ್ಕಾರ’’, “ಕನ್ನಡ ಕುವರ-ಕುವರಿ’ ಪ್ರಶಸ್ತಿ ಪುರಸ್ಕಾರ ಅದ್ದೂರಿಯಾಗಿ ವಿಜೃಂಭಣೆಯಿಂದ ಜುಲೈ 25, 26 ರಂದು ಶನಿವಾರ, ಭಾನುವಾರ ದಾವಣಗೆರೆಯ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದ ಬೃಹತ್ ವೇದಿಕೆಯಲ್ಲಿ ನಡೆಯಲಿದೆ ಎಂದು ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ.

ಕಳೆದ 35 ವರ್ಷಗಳಿಂದ ಈಗಾಗಲೇ ಸುಮಾರು 39 ಸಾವಿರ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸನ್ಮಾನ ಮಾಡುತ್ತಿದ್ದು ಪರೀಕ್ಷೆಗೆ ಮೊದಲೇ ಹಳ್ಳಿ ಹಳ್ಳಿಗೆ ಹೋಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಉಚಿತ ಕಾರ್ಯಾಗಾರ ನಡೆಸುತ್ತಾ ಬಂದಿದ್ದು ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪ್ರೇರಣೆಯೊಂದಿಗೆ ಉತ್ತಮ ಫಲಿತಾಂಶ ಬರುವ ಸದುದ್ದೇಶ ಕಲಾಕುಂಚ ಸಂಸ್ಥೆ.

ಜುಲೈ 25 ರಂದು ಶನಿವಾರ ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರಿನ ಕರ್ನಾಟಕ ಗಡಿನಾಡ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್‌ರವರು ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ವಾಸುದೇವ ಲಕ್ಷ್ಮ ಣ್ ರಾಯ್ಕರ್ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ.ವಾಮದೇವಪ್ಪ, ಮೋತಿ ಗೌರಮ್ಮ ಮೋತಿ ಪಿ.ರಾಮರಾವ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಮೋತಿ ಪರಮೇಶ್ವರ ರಾವ್, ಕಲಾಕುಂಚ ಕೇರಳ ಗಡಿನಾಡ ಶಾಖೆಯ ಸಂಸ್ಥಾಪಕರಾದ ಜಯಲಕ್ಷ್ಮೀ ಶ್ರೀರಾಮ ಕಾರಂತ್, ಕಲಾಕುಂಚ ಗೌರವ ಅಧ್ಯಕ್ಷರಾದ ಕೆ.ಎಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿಯವರು ವೇದಿಕೆಯಲ್ಲಿ ಉಪಸ್ಥಿತರಿರುವರು.

ಜುಲೈ 26 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷರೂ ಕಲಾಕುಂಚ ಮೈಸೂರು ಶಾಖೆಯ ಅಧ್ಯಕ್ಷರಾದ ಡಾ. ನಾಗರಾಜ್ ವಿ. ಬೈರಿಯವರು ಉದ್ಘಾಟಿಸಲಿದ್ದಾರೆ, ಅಧ್ಯಕ್ಷತೆಯನ್ನು ಕಲಾಕುಂಚ, ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು ಶಾಖೆಯ ಸಮಿತಿ ಸದಸ್ಯರಾದ ಎನ್.ಗಂಗಾಧರಪ್ಪ, ಕೆ.ಎಂ.ಮುನಿಯಪ್ಪ, ಕಲಾಕುಂಚದ ಅಧ್ಯಕ್ಷರಾದ ವಾಸುದೇವ ಲಕ್ಷö್ಮಣ್ ರಾಯ್ಕರ್, ಕಲಾಕುಂಚ ಮಹಿಳಾ ವಿಭಾಗದ ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್, ಚಿಕ್ಕಮಗಳೂರಿನ ಸೇಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625ಕ್ಕೆ 625 ಪರಿಪೂರ್ಣ ಅಂಕ ಪಡೆದ ಕುಮಾರಿ ಬೃಂದಾ ಎಂ.ತಾಪ್ಯೆ ಆಗಮಿಸಲಿದ್ದಾರೆ.

ಎರಡು ದಿನಗಳ ಕಾಲ ಬೆಳಿಗ್ಗೆ 9 ಗಂಟೆಗೆ ಪ್ರತಿಭಾವಂತ ಪ್ರಶಸ್ತಿಗಳಿಗೆ ಭಾಜನರಾದ ಕನ್ನಡ ಮಕ್ಕಳಿಗೆ, ಮಂಗಳ ವಾದ್ಯದೊಂದಿಗೆ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು, ಕಲಾಕುಂಚದ ಮುತ್ತೈ ದೆಯರು ಮಕ್ಕಳ ತಂದೆ ತಾಯಿಗಳೊಂದಿಗೆ ಕನ್ನಡ ತಿಲಕವಿಟ್ಟು, ಕನ್ನಡ ಕಂಕಣ ಕಟ್ಟಿ, ಕನ್ನಡಾರತಿ ಬೆಳಗಿ, ವೇದಿಕೆಯ ಪ್ರತ್ಯೇಕ ಮದುವೆ ಮಂಟಪದ ಸಿಂಹಾಸನದಲ್ಲಿ ಕೂರಿಸಿ ಮಕ್ಕಳ ತಲೆಯ ಮೇಲೆ ಕೀರಿಟವಿಟ್ಟು, ಪುಷ್ಪವೃಷ್ಟಿಯೊಂದಿಗೆ, ಕನ್ನಡ ತಾಯಿ ಭುವನೇಶ್ವರಿಯ ಸ್ಮರಣಿಕೆ, ಚಿನ್ನದ ಲೇಪನದ ಪದಕ, ಅವರದ್ದೇ ಭಾವಚಿತ್ರವಿರುವ ಅವರ ತಂದೆ-ತಾಯಿ ಹೆಸರು, ವ್ಯಾಸಂಗ ಮಾಡಿದ ವಿದ್ಯಾಸಂಸ್ಥೆಯ ಹೆಸರಿನೊಂದಿಗೆ ಸನ್ಮಾನ ಪತ್ರ ವಿತರಿಸಿ, ಗಣ್ಯಮಾನ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಗುತ್ತದೆ ಎಂದು ಕಲಾಕುಂಚ ಮತ್ತು ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಸರ್ವಸದಸ್ಯರು, ಪರ್ದಾಧಿಕಾರಿಗಳು ಪ್ರಕಟಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಾಲಿಗ್ರಾಮ ಗಣೇಶ್ ಶೆಣೈ, ವಾಸುದೇವ ಲಕ್ಷ್ಮ ಣ್ ರಾಯ್ಕರ್, ಕೆ.ಎಚ್.ಮಂಜುನಾಥ್, ಜ್ಯೋತಿ ಗಣೇಶ್‌ಶೆಣೈ, ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಶಾಂತಪ್ಪ ಪೂಜಾರಿ, ವಸಂತಿ ಮಂಜುನಾಥ್, ಕೆ.ಸಿ.ಉಮೇಶ್ ಉಪಸ್ಥಿತರಿದ್ದರು.