ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಮಾದಕ ವ್ಯಸನ ವಿರೋಧಿ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ

0
7

ವಿದ್ಯಾರ್ಥಿಗಳು ತಮ್ಮ ಹಕ್ಕುಗಳು ಹಾಗೂ ಕಾನೂನುಗಳ ಬಗ್ಗೆ ಅರಿವು ಹೊಂದಿರುವುದು ಇಂದಿನ ಕಾಲದಲ್ಲಿ ಅತ್ಯಂತ ಅಗತ್ಯವಾಗಿದೆ. ಕಾನೂನಿನ ಅರಿವು ಹೊಂದುವುದರಿಂದ ಸಮಾಜದಲ್ಲಿ ನಡೆಯುವ ಅನ್ಯಾಯ, ಶೋಷಣೆ ಹಾಗೂ ಅಪರಾಧಗಳ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಲು ಸಾಧ್ಯವಾಗುತ್ತದೆ.

ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಉಡುಪಿ ಮಹಿಳಾ ಪೊಲೀಸ್ ಠಾಣೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24ರಂದು ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ವಹಿಸಿದ್ದರು. ಪೋಕ್ಸೋ ಕಾಯ್ದೆ ಹಾಗೂ ಇತರ ಕಾನೂನು ವಿಷಯಗಳ ಕುರಿತು ನಗರ ಠಾಣೆಯ ಪಿಎಸ್‌ಐ ಪ್ರಭಾಕರ್ ಉಪನ್ಯಾಸ ನೀಡಿದರು. ಪೊಲೀಸ್ ಠಾಣೆಯ ಸಿಬ್ಬಂದಿ ಕುಮಾರಿ ನವ್ಯ ಅವರು ಮಕ್ಕಳಿಗೆ ಪೋಕ್ಸೋ ಕಾಯ್ದೆ ಹಾಗೂ ಮಾದಕ ವ್ಯಸನ ವಿರೋಧಿ ಕಾನೂನುಗಳ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.

ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾನೂನು ಸಲಹೆಗಾರರಾದ ರಕ್ಷಿತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಅಧಿಕಾರಿಗಳು ಹಾಗೂ ಉಪನ್ಯಾಸಕರಾದ ಪರಮೇಶ್ವರ್ ಎಂ. ಮೊಗವೀರ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಸುಮಾರು 100 ವಿದ್ಯಾರ್ಥಿಗಳು ಭಾಗವಹಿಸಿ ಕಾನೂನು ಅರಿವಿನ ಪ್ರಯೋಜನ ಪಡೆದುಕೊಂಡರು.