ಬಾಲ ಕಾರ್ಮಿಕರ ಪರ ಹೋರಾಟ ಮತ್ತು ಮಾನವ ಕಳ್ಳಸಾಗಣಿಕೆ ಮುಕ್ತ ಸಮಾಜಕ್ಕಾಗಿ ಜಾಗೃತಿ ಕಾರ್ಯಕ್ರಮ

0
135

ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ, ಮಾನವ ಕಳ್ಳಸಾಗಣಿಕೆ ತಡೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಕಾನೂನು ಅರಿವು ಜಾಗೃತಿ ಕಾರ್ಯಕ್ರಮ ನವೆಂಬರ್ 24 ಸೋಮವಾರ ಮಂಗಳೂರಿನ ಎಸ್.ಸಿ.ಎಸ್ ಪ್ರಥಮ ದರ್ಜೆ ಕಾಲೇಜಿನ ಮಾನವ ಹಕ್ಕುಗಳ ಘಟಕ, ಮಾನವ ಕಳ್ಳಸಾಗಣೆ ವಿರೋಧಿ ಘಟಕ ಹಾಗೂ ಮಾದಕ ವ್ಯಸನ ನಿರೋಧಕ ಘಟಕಗಳ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ , ಪೊಲೀಸ್ ಇಲಾಖೆ ಮತ್ತು ಮಕ್ಕಳ ರಕ್ಷಣಾ ಘಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ “ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ–1986 ಮತ್ತು ತಿದ್ದುಪಡಿ ಕಾಯ್ದೆ–2016; ಮಾನವ ಕಳ್ಳಸಾಗಣಿಕೆ ತಡೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಎಸ್.ಸಿ.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಶ್ರೀ ಯು.ಕೆ. ಖಾಲಿದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಶ್ರೀಮತಿ ಜೈಬುನ್ನಿಸಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಉದ್ಘಾಟನಾ ಭಾಷಣದ ಮೂಲಕ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವನ್ನು ನೀಡಿದರು. ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಶ್ರೀಮತಿ ನಾಜಿಯಾ ಸುಲ್ತಾನಾ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು. ಅತಿಥಿ ಭಾಷಣದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಬಾಲ ಕಾರ್ಮಿಕರ ಮತ್ತು ಕಿಶೋರ ಕಾರ್ಮಿಕರ ಬಗ್ಗೆ ವಿವರಣೆ ನೀಡುವುದರ ಮುಖಾಂತರ ಕಾನೂನಿನ ಅರಿವನ್ನು ಮೂಡಿಸಿದರು. ಪ್ರಾಂಶುಪಾಲರಾದ ಶ್ರೀ ಹಾರ್ದಿಕ್ ಪಿ. ಚೌಹಾಣ್ ಬಂದಂತಹ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮೂರು ಪ್ರಮುಖ ವಿಷಯಗಳ ಕುರಿತು ಮಾನ್ಯ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಿದರು:

ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಶ್ರೀ ಗುರುವಪ್ಪ ಕಾಂತಿ, ಉಪನಿರೀಕ್ಷಕರು, ಉರ್ವ ಪೊಲೀಸ್ ಠಾಣೆ, ಮಂಗಳೂರು ಇವರು ಉಪನ್ಯಾಸವನ್ನು ನೀಡಿದವರು , ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ–1986 ಹಾಗೂ ತಿದ್ದುಪಡಿ ಕಾಯ್ದೆ–2016 ಸಂಬಂಧಿಸಿದಂತೆ ಶ್ರೀ ಕುಮಾರ್ ಬಿ.ಆರ್., ಕಾರ್ಮಿಕಾಧಿಕಾರಿ, ದ.ಕ. ಉಪವಿಭಾಗ ಇವರು ಬಾಲ ಕಾರ್ಮಿಕ ಪದ್ಧತಿಯನ್ನು ನಿಲ್ಲಿಸಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಬಗ್ಗೆ ತಿಳಿಸಿದರು.

ಬಾಲ ಹಕ್ಕು ರಕ್ಷಣೆ ಮತ್ತು ದತ್ತು ನಿಯಮಗಳು ಬಗ್ಗೆ ಶ್ರೀ ಕುಮಾರ್ ಶೆಟ್ಟಿಗಾರ್, ಮಕ್ಕಳ ರಕ್ಷಣೆ ಅಧಿಕಾರಿ, ದ.ಕ. ಜಿಲ್ಲೆ ಈ ಕಾರ್ಯಕ್ರದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಂಗಳೂರು ದ.ಕ ಶ್ರೀ ಶ್ರೀನಿವಾಸ್ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು 4ನೇ ವೃತ್ತ ಮಂಗಳೂರು ಶ್ರೀ ರಾಜಶೇಖರ ರೆಡ್ಡಿ ಸಹಕರಿಸಿದರು. ಎಲ್ಲಾ ಪ್ರಮುಖ ವಿಷಯಗಳಿಗೆ ಸಮಗ್ರ ಅರಿವು ಮೂಡಿಸುವಲ್ಲಿ ಈ ಜಾಗೃತಿ ಕಾರ್ಯಕ್ರಮ ಪರಿಣಾಮಕಾರಿ ಆಗಿದ್ದು, 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು.

ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ವರ್ಷ ರೈ ನಿರೂಪಿಸಿದರು, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಶ್ರೀ ಸುಧೀಪ್ ವಂದಿಸಿದರು.

LEAVE A REPLY

Please enter your comment!
Please enter your name here