ಉಡುಪಿ : ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ತೃತೀಯ ಬಿಸಿಎ ವಿದ್ಯಾರ್ಥಿನಿ ಆಯಿಷಾ ಸಫಾ ಅವರು ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ 50 ಕೆ.ಜಿ. ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚಾಂಪಿಯನ್‌ಶಿಪ್ ನಡೆಯಿತು.
ಆಯಿಷಾ ಸಫಾ ಅವರಿಗೆ ರೋಹಿತಾಕ್ಷ ಉಧ್ಯಾವರ ಅವರ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗಿದ್ದು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಯತೀಶ್ ಕುಮಾರ್ ಅವರು ಸಹಕಾರ ನೀಡಿದರು. ಕ್ರೀಡಾ ಇಂಟರ್ನ್ ಚಂದ್ರಿಕಾ ಕಾಂಬ್ಳೆ ಉಪಸ್ಥಿತರಿದ್ದರು.

