ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯಾದ ಬಳಿಕದ ಮೊದಲ ರಾಮನವಮಿ ಇಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
‘’ರಾಮ ಮಂದಿರದ ಪ್ರಾಣಪ್ರತಿಷ್ಠೆಯ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ರಾಮನವಮಿ ಆಚರಿಸಲಾಗುತ್ತಿದ್ದು, ಅಯೋಧ್ಯೆಯು ಆನಂದದ ಉತ್ತುಂಗದಲ್ಲಿ ತೇಲಾಡುತ್ತಿದೆ’’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
‘’ಶ್ರೀರಾಮನ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ. ಸದಾಚಾರ ಮತ್ತು ಶಾಂತಿಯ ಕಡೆಗೆ ಹೋಗಲು ಶ್ರೀರಾಮ ನಮಗೆ ಮಾರ್ಗದರ್ಶಿಯಾಗಲಿ’’ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.
‘’ಶ್ರೀರಾಮನ ಜೀವನ ಮತ್ತು ಆದರ್ಶಗಳು ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಧ್ಯೇಯಕ್ಕೆ ಬಲವಾದ ಆಧಾರವಾಗಲಿದೆ ಎಂಬ ವಿಶ್ವಾಸ ನನಗಿದೆ. ರಾಮನ ಆಶೀರ್ವಾದವು ಆತ್ಮ ನಿರ್ಭರ ಭಾರತದ ಸಂಕಲ್ಪಕ್ಕೆ ಹೊಸ ಶಕ್ತಿಯನ್ನು ನೀಡುತ್ತದೆ’’ ಎಂದು ಅವರು ತಿಳಿಸಿದ್ದಾರೆ.