ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯುಧ ಪೂಜಾ ಕಾರ್ಯಕ್ರಮ

0
12

ನವರಾತ್ರಿಯ ಶುಭ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯುಧ ಪೂಜೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ವಿಘ್ನೇಶ್ ಭಟ್ ಪಡ್ನೂರು ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು.

ಕಾಲೇಜಿನಬಸ್ಸುಗಳು, ಪ್ರಯೋಗಾಲಯದ ಉಪಕರಣಗಳು ಹಾಗೂ ಕಚೇರಿಯ ಪರಿಕರಗಳಿಗೆ ಪೂಜೆ ಸಲ್ಲಿಸುವ ಮೂಲಕ ಅವುಗಳ ಮಹತ್ವವನ್ನು ಗೌರವಿಸಲಾಯಿತು. ನಮ್ಮ ದೈನಂದಿನ ಕಾರ್ಯಗಳಿಗೆ ನೆರವಾಗುವ ಸಾಧನಗಳು ಮತ್ತು ಉಪಕರಣಗಳು ಸುರಕ್ಷಿತವಾಗಿ, ನಿರಂತರವಾಗಿ ಹಾಗೂ ಸುಗಮವಾಗಿ ಕಾರ್ಯನಿರ್ವಹಿಸಲಿ ಎಂಬ ಉದ್ದೇಶದಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಸಂಪ್ರದಾಯ, ಶ್ರದ್ಧೆ ಮತ್ತು ಕಾಯಕದ ಮಹತ್ವವನ್ನು ಸಾರುವ ಈ ಆಚರಣೆಯು ಕಾಲೇಜಿನ ವಾತಾವರಣದಲ್ಲಿ ಭಕ್ತಿ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಪ್ರತಿಬಿಂಬಿಸಿತು.ಈ ಸಂದರ್ಭದಲ್ಲಿಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್ , ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.