Wednesday, September 11, 2024
Homeಉಡುಪಿಆ.25ರಂದು ಶ್ರೀ ಉಚ್ಚಿಲ ಮಹಾಲಕ್ಷ್ಮಿ ದೇವಾಲಯದಲ್ಲಿ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂನ ರಾಜ್ಯ ಕಾರ್ಯಕಾರಿಣಿ ಸಭೆ

ಆ.25ರಂದು ಶ್ರೀ ಉಚ್ಚಿಲ ಮಹಾಲಕ್ಷ್ಮಿ ದೇವಾಲಯದಲ್ಲಿ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂನ ರಾಜ್ಯ ಕಾರ್ಯಕಾರಿಣಿ ಸಭೆ

ಉಡುಪಿ: ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ರಾಜ್ಯ ಸಮಿತಿಯ ಕಾರ್ಯಕಾರಿಣಿ ಸಭೆ ಆ. 25ರಂದು ಭಾನುವಾರ ಕಾಪುವಿನ ಶ್ರೀ ಉಚ್ಚಿಲ ಮಹಾಲಕ್ಷ್ಮಿ ದೇವಾಲಯದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಸಭೆ ಆರಂಭಗೊಳ್ಳಲಿದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿನ ವಿಷಯಗಳ ಕುರಿತು, ರಾಜ್ಯ ಘಟಕದ ಪದಾಧಿಕಾರಿಗಳ ಜವಾಬ್ದಾರಿ ಮತ್ತು ಹೊಣೆಗಾರಿಕೆ ಬಗ್ಗೆ ಮತ್ತು ಜಿಲ್ಲಾ ಹಾಗೂ ರಾಜ್ಯ ಸಂಘಟನೆಗಳ ಅಭಿವೃದ್ಧಿ ಕುರಿತು ಚರ್ಚೆಗಳು ನಡೆಯಲಿವೆ.
ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ-ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರಾದ ಡಾ. ಎನ್.‌ ಜಯರಾಂ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಮಿತಿಯ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಸಮಿತಿಯ ಸದಸ್ಯರುಗಳು ಭಾಗಿಯಾಗಲಿದ್ದಾರೆ.

RELATED ARTICLES
- Advertisment -
Google search engine

Most Popular