Tuesday, April 22, 2025
Homeಬಂಟ್ವಾಳಬಿ.ಸಿ.ರೋಡು: ತಾಲ್ಲೂಕು ಮಟ್ಟದ 'ಸಂಜೀವಿನಿ ಸಂತೆ' ಸ್ವಸಹಾಯ ಸಂಘಗಳಿಗೆ ರೂ ೧೪.೬೪ ಕೋಟಿ ಸಾಲ ವಿತರಣೆ

ಬಿ.ಸಿ.ರೋಡು: ತಾಲ್ಲೂಕು ಮಟ್ಟದ ‘ಸಂಜೀವಿನಿ ಸಂತೆ’ ಸ್ವಸಹಾಯ ಸಂಘಗಳಿಗೆ ರೂ ೧೪.೬೪ ಕೋಟಿ ಸಾಲ ವಿತರಣೆ


ಬಂಟ್ವಾಳ: ಮಹಿಳೆಯರನ್ನು ಸ್ವಾವಲಂಬಿಯನ್ನಾಗಿ ರೂಪಿಸಲು ಸರ್ಕಾರದ ಆಶಯದಂತೆ ತಾಲ್ಲೂಕಿನಲ್ಲಿ ಒಟ್ಟು 14,973 ಸದಸ್ಯರನ್ನು ಒಳಗೊಂಡಿರುವ ತಲಾ 12 ಸದಸ್ಯರ ಒಟ್ಟು 1,432 ಸ್ವಸಹಾಯ ಸಂಘಗಳನ್ನು ರಚಿಸಲಾಗಿದ್ದು, ಒಟ್ಟು 51 ಒಕ್ಕೂಟಗಳಿಗೆ ವಿವಿಧ ಗೃಹ ಉತ್ಪನ್ನಗಳ ತಯಾರಿ ಮತ್ತು ಮಾರಾಟಕ್ಕಾಗಿ ವಿವಿಧ ರಾಷ್ಟಿçÃಕೃತ ಬ್ಯಾಂಕಿನ ಮೂಲಕ ಒಟ್ಟು ರೂ 14,64,21 ಕೋಟಿ ಮೊತ್ತದ ಸಾಲ ವಿತರಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಹೇಳಿದ್ದಾರೆ.
ಇಲ್ಲಿನ ಬಿ.ಸಿ.ರೋಡು ಅಂಬೇಡ್ಕರ್ ಭವನ ಬಳಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಜ್ಯ ಗ್ರಾಮಿಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ‘ಭಾರತಾಂಬೆ ಸಂಜೀವಿನಿ’ ತಾಲ್ಲೂಕು ಮಟ್ಟದ ಮಹಿಳಾ ಒಕ್ಕೂಟ ಇದೆ ಸಹಭಾಗಿತ್ವದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಅಂತರ್ ರಾಷ್ಟಿçÃಯ ಮಹಿಳಾ ದಿನಾಚರಣೆ ಮತ್ತು ಸ್ವಸಹಾಯ ಸಂಘಗಳಿಗೆ ಬ್ಯಾಂಕ್ ಸಾಲ ವಿತರಣೆ’ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕ ಮಾತನಾಡಿದರು.
ಭಾರತಾಂಬೆ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಆಕರ್ಷಿಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಯಲಕ್ಷ್ಮಿ ಕಾರ್ಯಕ್ರಮ ಉದ್ಘಾಟಿಸಿದರು.
ಇದೇ ವೇಳೆ ತಾಲ್ಲೂಕು ಮಟ್ಟದ ಸಂಜೀವಿನಿ ಸಂತೆ, ವನಧನ ವಿಕಾಸ ಕೇಂದ್ರದ ಉತ್ಪನ್ನಗಳ ಅನಾವರಣಗೊಳಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಸ್ತೂರಿ ಬೊಳುವಾರು ಮಾಹಿತಿ ನೀಡಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕೆ.ಇ.ಜಯರಾಮ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುನಿತಾ ಶುಭ ಹಾರೈಸಿದರು. ಸಂಘದ ಸದಸ್ಯರಾದ ಸೌಮ್ಯ ಸ್ವಾಗತಿಸಿ, ಮಮತಾ ವಂದಿಸಿದರು. ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

RELATED ARTICLES
- Advertisment -
Google search engine

Most Popular